ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ವ್ಯರ್ಥ ದರ್ಶನವೂ ಮೋಸದ ಶಕುನವೂ ಇರುವದಿಲ್ಲ.
22ಮನುಷ್ಯಪುತ್ರನೇ, ದಿನಗಳು ಬಹಳವಾ ಗುತ್ತಿವೆ; ಪ್ರತಿ ದರ್ಶನವು ತಪ್ಪುತ್ತದೆ ಎಂದು ಇಸ್ರಾ ಯೇಲ್ ದೇಶದಲ್ಲಿ ಹೇಳಿಕೊಳ್ಳುವ ಆ ಗಾದೆ ಏನು?
23ಆದದರಿಂದ ಅವರಿಗೆ ಹೀಗೆ ಹೇಳು ದೇವರಾದ ಕರ್ತನು ಹೇಳುವದೇನಂದರೆ--ನಾನು ಈ ಗಾದೆ ಯನ್ನು ನಿಲ್ಲಿಸುತ್ತೇನೆ, ಅದನ್ನು ಇನ್ನು ಮೇಲೆ ಇಸ್ರಾ ಯೇಲಿನಲ್ಲಿ ಗಾದೆಯಂತೆ ಉಪಯೋಗಿಸುವದಿಲ್ಲ; ದಿನಗಳು ಹತ್ತಿರವಾಗಿವೆ ಪ್ರತಿ ದರ್ಶನವು ಸವಿಾಪ ವಾಗಿದೆ ಎಂದು ಅವರಿಗೆ ಹೇಳು.
24ಇಸ್ರಾಯೇಲಿನ ಮನೆತನದವರೊಳಗೆ ಇನ್ನು ಮೇಲೆ ಯಾವ ವ್ಯರ್ಥ ದರ್ಶನವೂ ಮೋಸದ ಶಕುನವೂ ಇರುವದಿಲ್ಲ.
25ನಾನೇ ಕರ್ತನು, ನಾನೇ ಮಾತನಾಡುತ್ತೇನೆ. ನಾನು ಆಡುವ ಮಾತು ನೆರವೇರುವದು, ಅದು ಇನ್ನು ನಿಧಾನವಾಗುವದಿಲ್ಲ. ಓ ತಿರುಗಿ ಬೀಳುವ ಮನೆತನ ದವರೇ, ನಿಮ್ಮ ದಿವಸಗಳಲ್ಲಿ ನಾನು ನುಡಿದದ್ದನ್ನು ನಡಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
26ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ --
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ