೧ ಅರಸುಗಳು 11:2

ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್‌ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 11

1ಅರಸನಾದ ಸೊಲೊಮೋನನು ಫರೋಹನ ಮಗಳಲ್ಲದೆ ಅನ್ಯ ಜನಾಂಗಗಳ ಸ್ತ್ರೀಯರಾದ--ಮೋವಾಬ್ಯರು ಅಮ್ಮೋನ್ಯರು ಎದೋ ಮ್ಯರು ಚೀದೋನ್ಯರು ಹಿತ್ತಿಯರನ್ನೂ ಮೋಹಿಸಿದನು.

2ಈ ಜನಾಂಗಗಳನ್ನು ಕುರಿತು ಕರ್ತನು ಇಸ್ರಾಯೇಲ್‌ ಮಕ್ಕಳಿಗೆ--ನಿಮಗೂ ಅವರಿಗೂ ಕೊಟ್ಟುಕೊಳ್ಳುವದು ಇರಬಾರದು, ಅವರು ನಿಶ್ಚಯವಾಗಿ ನಿಮ್ಮ ಹೃದಯವನ್ನು ತಮ್ಮ ದೇವರುಗಳ ಕಡೆಗೆ ತಿರುಗಿಸುವರು ಎಂದು ಹೇಳಿದ್ದನು. ಆದರೆ ಸೊಲೊಮೋನನು ಪ್ರೀತಿಯಲ್ಲಿ ಇವರನ್ನು ಅಂಟಿಕೊಂಡನು.

3ಅವನಿಗೆ ಅರಸುಗಳ ಕುಮಾರ್ತೆಯರಾದ ಏಳು ನೂರು ಮಂದಿ ಪತ್ನಿಯರೂ ಮುನ್ನೂರು ಮಂದಿ ಉಪಪತ್ನಿಗಳೂ ಇದ್ದರು. ಅವನ ಪತ್ನಿಯರು ಅವನ ಹೃದಯವನ್ನು ತಿರುಗಿಸಿದರು.

4ಸೊಲೊಮೋನನು ಮುದುಕನಾದ ಕಾಲದಲ್ಲಿ ಏನಾಯಿತಂದರೆ, ಅವನ ಪತ್ನಿಯರು ಅನ್ಯದೇವರುಗಳ ಕಡೆಗೆ ಅವನ ಹೃದಯವನ್ನು ತಿರುಗ ಮಾಡಿದರು. ಅವನ ಹೃದಯವು ತನ್ನ ತಂದೆಯಾದ ದಾವೀದನ ಹೃದಯದ ಹಾಗೆ ತನ್ನ ದೇವರಾದ ಕರ್ತನ ಸಂಗಡ ಪರಿಪೂರ್ಣವಾಗಿ ಇರಲಿಲ್ಲ.

೧ ಅರಸುಗಳು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी