೧ ಸಮುವೇಲನು 26:24

ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 26

22ದಾವೀದನು ಪ್ರತ್ಯುತ್ತರ ವಾಗಿ--ಇಗೋ, ಅರಸನ ಈಟಿಯು ಇಲ್ಲಿ ಅದೆ. ಪ್ರಾಯದವರಲ್ಲಿ ಒಬ್ಬನು ಈ ಕಡೆಗೆ ಬಂದು ಅದನ್ನು ತಕ್ಕೊಂಡು ಹೋಗಲಿ.

23ಆದರೆ ಕರ್ತನು ಪ್ರತಿಯೊ ಬ್ಬನಿಗೆ ಅವನ ನೀತಿಗೂ ಅವನ ನಂಬಿಗಸ್ತಿಕೆಗೂ ತಕ್ಕ ಫಲವನ್ನು ಕೊಡಲಿ. ಕರ್ತನು ಈ ಹೊತ್ತು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು. ಆದರೆ ನಾನು ಕರ್ತನ ಅಭಿಷಿಕ್ತನ ಮೇಲೆ ನನ್ನ ಕೈಚಾಚಲು ಮನಸ್ಸಿ ಲ್ಲದೆ ಇದ್ದೆನು.

24ಇಗೋ, ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ ಹಾಗೆಯೇ ನನ್ನ ಪ್ರಾಣವು ಕರ್ತನ ದೃಷ್ಟಿಗೆ ದೊಡ್ಡದಾಗಿರಲಿ. ಆತನು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ ಅಂದನು.

25ಆಗ ಸೌಲನು ದಾವೀದನಿಗೆ--ನನ್ನ ಮಗನಾದ ದಾವೀದನೇ, ನೀನು ಆಶೀರ್ವದಿಸಲ್ಪ ಡುವಿ; ನೀನು ಮಹತ್ಕಾರ್ಯಗಳನ್ನು ಮಾಡುವಿ, ಗೆದ್ದೇ ಗೆಲ್ಲುವಿ ಅಂದನು. ಹಾಗೆಯೇ ದಾವೀದನು ತನ್ನ ದಾರಿಹಿಡಿದು ಹೋದನು; ಸೌಲನು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.

೧ ಸಮುವೇಲನು 26 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी