ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ.
8ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
10ನೀನು ಹುಟ್ಟಿಸು ವದೇನು ಎಂದು ತನ್ನ ತಂದೆಯನ್ನು ಕೇಳುವವನಿಗೆ ಇಲ್ಲವೇ ನೀನು ಹೆರುವದೇನು ಎಂದು ಹೆಂಗಸನ್ನು ಕೇಳುವವನಿಗೆ ಅಯ್ಯೋ.
11ಇಸ್ರಾಯೇಲಿನ ಪರಿ ಶುದ್ಧನೂ ಅದನ್ನು ರೂಪಿಸಿದವನೂ ಆಗಿರುವ ಕರ್ತನು--ಮುಂದೆ ಸಂಭವಿಸುವ ನನ್ನ ಮಕ್ಕಳ ವಿಷಯವಾಗಿಯೂ ನನ್ನ ಕೈಕೆಲಸದ ವಿಷಯವಾ ಗಿಯೂ ನೀವು ನನಗೆ ಆಜ್ಞೆ ಮಾಡುವಿರಾ?
12ನಾನು ಭೂಮಿಯನ್ನು ಉಂಟುಮಾಡಿ, ಅದರ ಮೇಲೆ ಮನು ಷ್ಯನನ್ನು ಸೃಷ್ಟಿಸಿದೆನು; ನನ್ನ ಕೈಗಳೇ ಆಕಾಶಗಳನ್ನು ವಿಸ್ತರಿಸಿದವು ಮತ್ತು ನಾನು ಅದರ ಸೈನ್ಯಕ್ಕೆಲ್ಲಾ ಅಪ್ಪಣೆ ಕೊಟ್ಟೆನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ