ಯೆರೆಮಿಯ 33:6

ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 33

4ದಿಬ್ಬಗಳಿಂದಲೂ ಕತ್ತಿಯಿಂದಲೂ ಕೆಡವಿ ಹಾಕಲ್ಪಟ್ಟ ಈ ಪಟ್ಟಣದ ಮನೆಗಳ ವಿಷಯವೂ ಯೆಹೂದದ ಅರಸರ ಮನೆಗಳ ವಿಷಯವೂ ಇಸ್ರಾ ಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--

5ಅವರು ಕಸ್ದೀಯರ ಸಂಗಡ ಯುದ್ಧಮಾಡುವದಕ್ಕೂ ನಾನು ನನ್ನ ಕೋಪದಲ್ಲಿಯೂ ನನ್ನ ಉರಿಯಲ್ಲಿಯೂ ಕೊಂದುಹಾಕಿದ ಮನುಷ್ಯರ ಹೆಣಗಳಿಂದ ಅವುಗಳನ್ನು ತುಂಬಿಸುವದಕ್ಕೂ ಬರುತ್ತಾರೆ; ನಾನು ಈ ಪಟ್ಟಣಕ್ಕೆ ವಿರೋಧವಾಗಿ ಅದರ ಸಮಸ್ತ ಕೆಟ್ಟತನದ ನಿಮಿತ್ತ ನನ್ನ ಮುಖವನ್ನು ಮರೆಮಾಡಿದ್ದೇನೆ.

6ಇಗೋ, ನಾನು ಅದಕ್ಕೆ ಕ್ಷೇಮವನ್ನೂ ಸ್ವಸ್ಥತೆಯನ್ನೂ ಹುಟ್ಟಿಸಿ ಅವರನ್ನು ಗುಣಮಾಡಿ ಸಮಾಧಾನದ ಸತ್ಯವನ್ನು ಸಮೃದ್ಧಿಯಾಗಿ ಅವರಿಗೆ ಪ್ರಕಟಮಾಡುವೆನು.

7ಯೆಹೂದದ ಸೆರೆಯನ್ನೂ ಇಸ್ರಾಯೇಲಿನ ಸೆರೆಯನ್ನೂ ತಿರುಗಿಸಿ ಅವರನ್ನು ಮುಂಚಿನ ಹಾಗೆ ಕಟ್ಟುವೆನು.

8ಅವರು ಯಾವದರಿಂದ ನನಗೆ ವಿರೋಧವಾಗಿ ಪಾಪಮಾಡಿದರೋ ಆ ಅಕ್ರಮ ದಿಂದೆಲ್ಲಾ ಅವರನ್ನು ಶುದ್ಧ ಮಾಡುವೆನು; ಅವರು ಎಂಥವುಗಳಿಂದ ನನಗೆ ವಿರೋಧವಾಗಿ ಪಾಪಮಾಡಿ ನನ್ನ ವಿಷಯದಲ್ಲಿ ದ್ರೋಹಿಗಳಾಗಿದ್ದರೋ ಆ ಅಕ್ರಮ ಗಳನ್ನೆಲ್ಲಾ ಮನ್ನಿಸುವೆನು.

ಯೆರೆಮಿಯ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी