ಪ್ರಲಾಪಗಳು 2:20

ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 2

18ಅವರ ಹೃದಯವು ಕರ್ತನ ಕಡೆಗೆ ಕೂಗಿ--ಓ ಚೀಯೋನಿನ ಮಗಳ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನೀನು ವಿಶ್ರಾಂತಿ ತಕ್ಕೊಳ್ಳಬೇಡ; ನಿನ್ನ ಕಣ್ಣು ರೆಪ್ಪೆಯನ್ನು ಮುಚ್ಚಬೇಡ.

19ಎದ್ದೇಳು, ರಾತ್ರಿಯಲ್ಲಿ ಕೂಗು; ನಿನ್ನ ಹೃದಯವನ್ನು ಕರ್ತನ ಸಮ್ಮುಖದಲ್ಲಿ ಆರಂಭದ ಜಾವಗಳಲ್ಲಿ (ನೀರಿನಂತೆ) ಹೊಯ್ಯಿ; ನಿನ್ನ ಕೈಗಳನ್ನು ಆತನ ಕಡೆಗೆ ಎತ್ತು, ಯಾಕಂದರೆ ನಿನ್ನ ಚಿಕ್ಕ ಮಕ್ಕಳ ಪ್ರಾಣವು ಪ್ರತಿಯೊಂದು ಬೀದಿಯ ಬದಿಯಲ್ಲಿ ಹಸಿವೆಯಿಂದ ದುರ್ಬಲವಾಗಿದೆ.

20ಓ ಕರ್ತನೇ, ನೋಡು, ನೀನು ಇದನ್ನು ಯಾರಿಗೆ ಮಾಡಿದಿಯೋ ಯೋಚಿಸು. ಸ್ತ್ರೀಯರು ತಮ್ಮ ಫಲವಾದ ಗೇಣುದ್ದದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಪ್ರವಾದಿಯು ಕರ್ತನ ಪರಿಶುದ್ಧ ಸ್ಥಳದಲ್ಲಿ ಕೊಲ್ಲಲ್ಪಡಬೇಕೋ?

21ಎಳೇ ಪ್ರಾಯದವರೂ ಮುದುಕರೂ ಬೀದಿಗಳಲ್ಲಿ ಬಿದ್ದಿದ್ದಾರೆ; ನನ್ನ ಕನ್ಯೆಯರೂ ಯೌವನಸ್ಥರೂ ಕತ್ತಿಯಿಂದ ಹತರಾಗಿದ್ದಾರೆ; ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿ; ಕನಿಕರಿಸದೆ ಕೊಂದುಹಾಕಿ ಬಿಟ್ಟಿದ್ದೀ.

22ಪರಿಶುದ್ಧ ದಿನದಲ್ಲಿ ಆದ ಹಾಗೆ ಸುತ್ತಲೂ ನನ್ನ ಭಯಾನಕಗಳನ್ನು ನೀನು ಕರೆದಿರುವಿ, ಆದರೆ ಕರ್ತನ ಕೋಪದ ದಿನದಲ್ಲಿ ತಪ್ಪಿಸಿಕೊಂಡು ಉಳಿದವನು ಒಬ್ಬನೂ ಇಲ್ಲ; ನಾನು ಸಾಕಿ ಬೆಳೆಸಿದವರನ್ನು ನನ್ನ ಶತ್ರುವು ನಿರ್ಮೂಲ ಮಾಡಿದ್ದಾನೆ.

ಪ್ರಲಾಪಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी