ದಾನಿಯೇಲನು 8:9

ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 8

7ಅದು ಟಗರಿನ ಹತ್ತಿರ ಬರುವದನ್ನು ನಾನು ನೋಡಿದೆನು. ಅದರ ಮೇಲಿನ ಕ್ರೋಧದಿಂದ ಅದನ್ನು ಹಾದು ಅದರ ಎರಡು ಕೊಂಬುಗಳನ್ನು ಮುರಿದುಬಿಟ್ಟಿತು. ಅದರ ಮುಂದೆ ನಿಲ್ಲುವದಕ್ಕೆ ಟಗರಿಗೆ ಏನೂ ಶಕ್ತಿಯಿ ರಲಿಲ್ಲ, ಆದರೆ ಅದು ಟಗರನ್ನು ನೆಲಕ್ಕೆ ಉರುಳಿಸಿ ತುಳಿಯಿತು. ಟಗರನ್ನು ಅದರ ಕೈಯಿಂದ ಬಿಡಿಸುವವನು ಯಾರೂ ಇರಲಿಲ್ಲ.

8ಆದದರಿಂದ ಆ ಹೋತವು ಬಹಳವಾಗಿ ಹೆಚ್ಚಿಕೊಂಡಿತು. ಆದರೆ ಅದು ಪ್ರಾಬಲ್ಯಕ್ಕೆ ಬಂದ ಮೇಲೆ ಅದರ ದೊಡ್ಡ ಕೊಂಬು ಮುರಿದು ಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಅದ್ಭುತವಾದ ಕೊಂಬುಗಳು ಮೊಳೆತು ಆಕಾಶದ ಚತುರ್ದಿಕ್ಕಿಗೆ ಚಾಚಿಕೊಂಡವು.

9ಅವುಗಳಲ್ಲಿ ಒಂದರೊಳಗಿಂದ ಚಿಕ್ಕ ಕೊಂಬು ಮೊಳೆತು, ಬಹಳ ದೊಡ್ಡದಾಗಿ ಬೆಳೆದು, ದಕ್ಷಿಣದ ಕಡೆಗೂ ಪೂರ್ವದ ಕಡೆಗೂ ರಮ್ಯ ದೇಶದ ಕಡೆಗೂ ಪ್ರಬಲವಾಯಿತು.

10ಅದು ಆಕಾಶ ಸೈನ್ಯದ ಎತ್ತರಕ್ಕೆ ಬೆಳೆದು ಆ ಸೈನ್ಯದಲ್ಲಿಯೂ ನಕ್ಷತ್ರಗಳಲ್ಲಿಯೂ ಕೆಲವನ್ನು ನೆಲಕ್ಕೆ ತಳ್ಳಿ ಅವುಗಳನ್ನು ತುಳಿದುಹಾಕಿತು.

11ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು;

ದಾನಿಯೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी