ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
19ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.
20ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.
21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
22ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;
23ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ