ಬಿಳಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಯನ್ನು ಕಟ್ಟಿ ಮೋವಾಬಿನ ಪ್ರಭುಗಳ ಸಂಗಡ ಹೋದನು.
19ಆದರೆ ಈಗ ಕರ್ತನು ನನಗೆ ಮತ್ತೇನು ಹೇಳುವನೆಂದು ನಾನು ತಿಳುಕೊಳ್ಳುವ ಹಾಗೆ ನೀವು ಸಹ ದಯಮಾಡಿ ಈ ರಾತ್ರಿ ಇಲ್ಲಿ ಇಳುಕೊಳ್ಳಿರಿ ಅಂದನು.
20ಆಗ ದೇವರು ಬಿಳಾಮನ ಬಳಿಗೆ ರಾತ್ರಿಯಲ್ಲಿ ಬಂದು ಅವನಿಗೆ ಹೇಳಿದ್ದೇನಂದರೆ--ಈ ಮನುಷ್ಯರು ನಿನ್ನನ್ನು ಕರೆಯುವದಕ್ಕೆ ಬಂದಿದ್ದರೆ ನೀನು ಎದ್ದು ಅವರ ಸಂಗಡ ಹೋಗು; ಆದರೆ ನಾನು ನಿನಗೆ ಹೇಳುವ ಮಾತೇ ನೀನು ಆಡಬೇಕು ಅಂದನು.
21ಬಿಳಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಯನ್ನು ಕಟ್ಟಿ ಮೋವಾಬಿನ ಪ್ರಭುಗಳ ಸಂಗಡ ಹೋದನು.
22ಅವನು ಹೋದದರಿಂದ ದೇವರ ಕೋಪವು ಉರಿಯಿತು. ಕರ್ತನ ದೂತನು ಅವನಿಗೆ ಎದುರಾಳಿ ಯಾಗಿ ಮಾರ್ಗದಲ್ಲಿ ನಿಂತುಕೊಂಡನು; ಆದರೆ ಅವನು ತನ್ನ ಕತ್ತೆಯ ಮೇಲೆ ಹತ್ತಿಕೊಂಡಿದ್ದನು; ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
23ಕತ್ತೆಯು ಮಾರ್ಗದಲ್ಲಿ ನಿಂತಿದ್ದ ಕರ್ತನ ದೂತನನ್ನೂ ಅವನ ಕೈಯಲ್ಲಿರುವ ಬಿಚ್ಚು ಕತ್ತಿಯನ್ನೂ ನೋಡಿ ಮಾರ್ಗದಿಂದ ವಾರೆಯಾಗಿ ಹೊಲದೊಳಗೆ ಹೋಯಿತು; ಆಗ ಬಿಳಾಮನು ಕತ್ತೆಯನ್ನು ಮಾರ್ಗದೊಳಗೆ ತಿರುಗಿಸು ವದಕ್ಕೆ ಅದನ್ನು ಹೊಡೆದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ