ಯೆಹೆಜ್ಕೇಲನು 9:2

ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಆ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 9

1ಇದಲ್ಲದೆ ಆತನು ಮಹಾಶಬ್ದದಿಂದ ನನ್ನ ಕಿವಿಗಳಲ್ಲಿ ಕೂಗಿ ಹೇಳಿದ್ದೇನಂದರೆ-- ಪಟ್ಟಣದಲ್ಲಿ ವಿಚಾರಣೆ ಹೊಂದಿದ ಪ್ರತಿಯೊಬ್ಬರೂ ಕೈಯಲ್ಲಿ ನಾಶಮಾಡುವ ಆಯುಧಗಳನ್ನು ಹಿಡಿದು ಕೊಂಡು ಸವಿಾಪಕ್ಕೆ ಬನ್ನಿರಿ ಅಂದಾಗ

2ಇಗೋ, ಆರು ಮಂದಿ ಮನುಷ್ಯರು ಉತ್ತರ ದಿಕ್ಕಿನ ಮೇಲ್ಭಾಗದ ಆ ಮಾರ್ಗದಿಂದ ಬಂದರು ಮತ್ತು ಪ್ರತಿ ಮನುಷ್ಯನ ಕೈಯಲ್ಲಿ ಕೊಲ್ಲುವ ಆಯುಧವು ಇತ್ತು; ಅವರಲ್ಲಿ ಒಬ್ಬನು ನಾರುಮಡಿಯನ್ನು ಧರಿಸಿಕೊಂಡು ತನ್ನ ಪಕ್ಕೆಯಲ್ಲಿ ಲೇಖಕನ ದೌತಿಯನ್ನು ಇಟ್ಟುಕೊಂಡಿ ದ್ದನು. ಇವರೆಲ್ಲರೂ ಕಂಚಿನ ಯಜ್ಞವೇದಿಯ ಬಳಿ ಯಲ್ಲಿ ನಿಂತರು.

3ಇಸ್ರಾಯೇಲಿನ ದೇವರ ಮಹಿ ಮೆಯು ಯಾವದರ ಮೇಲಿತ್ತೋ ಆ ಕೆರೂಬಿಯನ್ನು ಬಿಟ್ಟು ಮನೆಯ ಹೊಸ್ತಿಲಿಗೆ ಹೋಯಿತು; ತನ್ನ ಪಕ್ಕದಲ್ಲಿ ಲೇಖಕನ ದೌತಿ ಇಟ್ಟುಕೊಂಡು ಆ ನಾರುಮಡಿಯನ್ನು ಧರಿಸಿದ್ದ ಆ ಮನುಷ್ಯನ ಕಡೆಗೆ ಕೂಗಿ

4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.

ಯೆಹೆಜ್ಕೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी