ನೆಹೆಮಿಯ 9:30

ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.

ಸಂದರ್ಭದೊಂದಿಗೆ ಓದಿ · ನೆಹೆಮಿಯ 9

28ಆದರೆ ಅವರು ವಿಶ್ರಾಂತಿಯನ್ನು ಹೊಂದಿದ ತರುವಾಯ ನಿನ್ನ ಮುಂದೆ ಕೆಟ್ಟದ್ದನ್ನು ತಿರುಗಿ ಮಾಡಿದರು. ಆದ ಕಾರಣ ಅವರ ಶತ್ರುಗಳು ಅವರನ್ನು ಆಳುವ ಹಾಗೆ ಅವರ ಕೈಯಲ್ಲಿ ಅವರನ್ನು ಒಪ್ಪಿಸಿದಿ; ಆದರೆ ಅವರು ತಿರಿಗಿ ನಿನ್ನನ್ನು ಕೂಗಿದಾಗ ನೀನು ಆಕಾಶದಿಂದ ಕೇಳಿ ಅವರನ್ನು ನಿನ್ನ ಕರುಣೆಯ ಪ್ರಕಾರ ಅನೇಕ ಸಾರಿ ವಿಮೋಚನೆ ಮಾಡಿದಿ.

29ನೀನು ಅವರನ್ನು ನಿನ್ನ ನ್ಯಾಯಪ್ರಮಾಣಕ್ಕೆ ತಿರಿಗಿ ಬರುವ ಹಾಗೆ ಅವರಿಗೆ ವಿರೋಧವಾಗಿ ಸಾಕ್ಷಿ ಹೇಳಿದಿ. ಆದರೆ ಅವರು ಗರ್ವಪಟ್ಟು ನಿನ್ನ ಆಜ್ಞೆಗಳನ್ನು ಕೇಳದೆ ಮನುಷ್ಯರು ಯಾವವುಗಳನ್ನು ಕೈಕೊಳ್ಳುವದರಿಂದ ಬದುಕುವರೋ ಆ ನಿನ್ನ ನ್ಯಾಯಗಳಿಗೆ ವಿರೋಧವಾಗಿ ಪಾಪಮಾಡಿಹೆಗಲುಕೊಡದೆ ಕುತ್ತಿಗೆಯನ್ನು ಕಠಿಣಪಡಿಸಿಕೊಂಡು ಕೇಳದೆಹೋದರು.

30ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.

31ಆದರೂ ನೀನು ನಿನ್ನ ಅಧಿಕವಾದ ಕರುಣೆಯ ನಿಮಿತ್ತ ಅವರನ್ನು ಸಂಪೂರ್ಣ ನಾಶಮಾಡಿ ಬಿಡ ಲಿಲ್ಲ; ಅವರನ್ನು ಕೈಬಿಡಲೂ ಇಲ್ಲ. ಯಾಕಂದರೆ ನೀನು ಕೃಪೆಯೂ ಕರುಣೆಯುಳ್ಳ ದೇವರಾಗಿದ್ದೀ.

32ಆದಕಾರಣ ನಮ್ಮ ದೇವರೇ, ಒಡಂಬಡಿಕೆಯನ್ನೂ ಕೃಪೆಯನ್ನೂ ಕೈಕೊಳ್ಳುವಂಥ ಮಹಾಪರಾಕ್ರಮವು ಳ್ಳಂಥ ಭಯಂಕರನಾದ ದೇವರೇ, ಅಶ್ಶೂರಿನ ಅರಸು ಗಳ ಕಾಲ ಮೊದಲುಗೊಂಡು ಇಂದಿನ ವರೆಗೆ ನಮ್ಮ ಮೇಲೆಯೂ ಅರಸುಗಳ ಮೇಲೆಯೂ ಪ್ರಧಾನರ ಮೇಲೆಯೂ ಯಾಜಕರ ಮೇಲೆಯೂ ಪ್ರವಾದಿಗಳ ಮೇಲೆಯೂ ಪಿತೃಗಳ ಮೇಲೆಯೂ ನಿನ್ನ ಸಮಸ್ತ ಜನರ ಮೇಲೆಯೂ ಬಂದ ಶ್ರಮೆಯು ನಿನಗೆ ಅಲ್ಪ ವಾಗಿ ಕಾಣಲ್ಪಡದೆ ಇರಲಿ.

ನೆಹೆಮಿಯ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी