ಧರ್ಮೋಪದೇಶಕಾಂಡ 5:27

ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 5

25ಹಾಗಾದರೆ ಈಗ ನಾವು ಯಾಕೆ ಸಾಯಬೇಕು? ಈ ಮಹಾಅಗ್ನಿಯು ನಿಶ್ಚಯವಾಗಿ ನಮ್ಮನ್ನು ದಹಿಸಿಬಿಡುವದು; ನಾವು ಇನ್ನೂ ನಮ್ಮ ದೇವರಾದ ಕರ್ತನ ಶಬ್ದವನ್ನು ಕೇಳಿದರೆ ಸಾಯುತ್ತೇವೆ.

26ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳ ಗಿಂದ ಮಾತನಾಡುವ ಜೀವವುಳ್ಳ ದೇವರ ಶಬ್ದವನ್ನು ಕೇಳಿ ಬದುಕಿದರು?

27ನೀನೇ ಸವಿಾಪಕ್ಕೆ ಹೋಗಿ ನಮ್ಮ ದೇವರಾದ ಕರ್ತನು ಹೇಳುವದನ್ನೆಲ್ಲಾ ಕೇಳಿ ನಮ್ಮ ದೇವರಾದ ಕರ್ತನು ನಿನಗೆ ಹೇಳಿದ್ದನ್ನೆಲ್ಲಾ ನೀನೇ ನಮಗೆ ಹೇಳು; ಆಗ ನಾವು ಕೇಳಿ ಅದನ್ನು ಮಾಡುವೆವು ಎಂದು ಹೇಳಿದಿರಿ.

28ನೀವು ನನ್ನ ಹತ್ತಿರ ಮಾತನಾಡಿದಾಗ ಕರ್ತನು ನಿಮ್ಮ ಮಾತುಗಳ ಶಬ್ದವನ್ನು ಕೇಳಿ ನನಗೆ--ಈ ಜನರು ನಿನಗೆ ಹೇಳಿದ ಮಾತುಗಳ ಶಬ್ದವನ್ನು ಕೇಳಿ ದ್ದೇನೆ. ಅವರು ಹೇಳಿದ್ದೆಲ್ಲಾ ಒಳ್ಳೇದು.

29ಅವರು ನನಗೆ ಭಯಪಟ್ಟು ನನ್ನ ಆಜ್ಞೆಗಳನ್ನೆಲ್ಲಾ ಎಂದೆಂದಿಗೂ ಕೈಕೊಳ್ಳುವಂಥ ಹೃದಯವು ಅವರಲ್ಲಿದ್ದರೆ ಎಷ್ಟೋ ಒಳ್ಳೇದು; ಆಗ ಅವರಿಗೂ ಅವರ ಮಕ್ಕಳಿಗೂ ಎಂದೆಂ ದಿಗೂ ಒಳ್ಳೆಯದಾಗುವದು.

ಧರ್ಮೋಪದೇಶಕಾಂಡ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी