೨ ಕೊರಿಂಥದವರಿಗೆ 2:12

ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 2

10ನೀವು ಯಾರಿಗೆ ಯಾವದನ್ನು ಮನ್ನಿಸುತ್ತೀರೋ ನಾನು ಸಹ ಮನ್ನಿಸುತ್ತೇನೆ; ನಾನು ಯಾವದನ್ನಾದರೂ ಮನ್ನಿಸಿದ್ದರೆ ಕ್ರಿಸ್ತನ ಸನ್ನಿಧಾನದಲ್ಲಿ ನಿಮ್ಮ ನಿಮಿತ್ತವೇ ಮನ್ನಿಸಿದೆನು.

11ಸೈತಾನನಿಗೆ ನಮ್ಮ ವಿಷಯದಲ್ಲಿ ಎಡೆ ಸಿಕ್ಕಬಾರದು; ಅವನ ಕುತಂತ್ರಗಳನ್ನು ನಾವು ಅರಿಯದವರಲ್ಲವಲ್ಲಾ.

12ಇದಲ್ಲದೆ ಕ್ರಿಸ್ತನ ಸುವಾರ್ತೆಯನ್ನು ಸಾರುವ ದಕ್ಕಾಗಿ ನಾನು ತ್ರೋವಕ್ಕೆ ಬಂದಾಗ ಕರ್ತನಿಂದ ನನಗೆ ಬಾಗಲು ತೆರೆಯಲ್ಪಟ್ಟಿತು.

13ಆದರೂ ನನ್ನ ಸಹೋದರನಾದ ತೀತನು ನನಗೆ ಸಿಕ್ಕಲಿಲ್ಲವಾದ ಕಾರಣ ನನ್ನ ಆತ್ಮಕ್ಕೆ ಉಪಶಮನವಿಲ್ಲದೆ ಅಲ್ಲಿದ್ದವರಿಂದ ಕಳುಹಿಸಿ ಕೊಂಡವನಾಗಿ ಹೊರಟು ಮಕೆದೋನ್ಯಕ್ಕೆ ಬಂದೆನು.

14ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;

೨ ಕೊರಿಂಥದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी