ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
3ಅವರ ತಂದೆಯು ಯೆಹೂದದಲ್ಲಿ ಕೋಟೆ ಯುಳ್ಳ ಪಟ್ಟಣಗಳ ಸಂಗಡ ಬೆಳ್ಳಿಬಂಗಾರವನ್ನೂ ಬೆಲೆ ಯುಳ್ಳ ವಸ್ತುಗಳನ್ನೂ ಅವರಿಗೆ ದಾನಗಳಾಗಿ ಕೊಟ್ಟನು. ಆದರೆ ಯೆಹೋರಾಮನು ಚೊಚ್ಚಲು ಮಗನಾದದ ರಿಂದ ಅವನಿಗೆ ರಾಜ್ಯವನ್ನು ಕೊಟ್ಟನು.
4ಯೆಹೋ ರಾಮನು ತನ್ನ ತಂದೆಯ ರಾಜ್ಯಕ್ಕೆ ಬಂದ ತರುವಾಯ ಅವನು ತನ್ನನ್ನು ಬಲಪಡಿಸಿಕೊಂಡು ತನ್ನ ಸಮಸ್ತ ಸಹೋದರರನ್ನೂ ಇಸ್ರಾಯೇಲಿನ ಪ್ರಧಾನರಲ್ಲಿ ಕೆಲ ವರನ್ನೂ ಕತ್ತಿಯಿಂದ ಕೊಂದುಹಾಕಿದನು.
5ಯೆಹೋ ರಾಮನು ಆಳಲಾರಂಭಿಸಿದಾಗ ಮೂವತ್ತೆರಡು ವರುಷ ದವನಾಗಿದ್ದು ಯೆರೂಸಲೇಮಿನಲ್ಲಿ ಎಂಟು ವರುಷ ಆಳಿದನು.
6ಅಹಾಬನ ಮನೆಯವರು ನಡೆದ ಹಾಗೆ ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದನು. ಅಹಾಬನ ಮಗಳು ಅವನಿಗೆ ಹೆಂಡತಿ ಯಾಗಿದ್ದಳು. ಅವನು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು,
7ಆದರೆ ಕರ್ತನು ದಾವೀದನ ಸಂಗಡ ಮಾಡಿದ ಒಡಂಬಡಿಕೆಗೋಸ್ಕರವೂ ಆತನು ಅವನಿಗೂ ಅವನ ಮಕ್ಕಳಿಗೂ ಸರ್ವಕಾಲಕ್ಕೂ ಬೆಳಕನ್ನು ಕೊಡು ವೆನೆಂದು ಹೇಳಿದ್ದರಿಂದಲೂ ಆತನು ದಾವೀದನ ಮನೆಯನ್ನು ನಾಶಮಾಡಲು ಮನಸ್ಸಿಲ್ಲದೆ ಇದ್ದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ