ಯೆರೆಮಿಯ 51:4

ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 51

2ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.

3ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.

4ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.

5ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.

6ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.

ಯೆರೆಮಿಯ 51 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी