ಇಬ್ರಿಯರಿಗೆ 7:2

ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 7

1ಈ ಮೆಲ್ಕಿಜೆದೇಕನು ಸಾಲೇಮಿನ ಅರಸನೂ ಮಹೋನ್ನತನಾದ ದೇವರ ಯಾಜಕನೂ ಆಗಿದ್ದು ರಾಜರನ್ನು ಸಂಹರಿಸಿ ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶಿರ್ವದಿಸಿದನು.

2ಅಬ್ರಹಾಮನು ಎಲ್ಲವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನು. ಆತನ ಹೆಸರಿಗೆ ಮೊದಲನೆಯದಾಗಿ ನೀತಿರಾಜನೆಂದು ತರುವಾಯ ಸಾಲೇಮಿನರಾಜ ಅಂದರೆ ಸಮಾಧಾನದ ರಾಜನೆಂದು ಅರ್ಥ.

3ಆತನಿಗೆ ತಂದೆಯೂ ತಾಯಿಯೂ ವಂಶಾವಳಿಯೂ ಇಲ್ಲ, ದಿವಸಗಳ ಆರಂಭವೂ ಜೀವದ ಅಂತ್ಯವೂ ಇಲ್ಲ. ಆದರೆ ಆತನು ದೇವರ ಮಗನಿಗೆ ಹೋಲಿಕೆಯಾಗಿ ಮಾಡಲ್ಪಟ್ಟಿದ್ದಾನೆ. ಇದಲ್ಲದೆ ಆತನು ನಿರಂತರವಾಗಿ ಯಾಜಕನಾಗಿದ್ದಾನೆ.

4ಈ ಮನುಷ್ಯನು ಎಷ್ಟು ದೊಡ್ಡವನಾಗಿದ್ದನೆಂದು ಆಲೋಚಿಸಿರಿ. ನಮ್ಮ ಮೂಲ ಪಿತೃವಾದ ಅಬ್ರಹಾ ಮನು ಸುಲುಕೊಂಡು ಬಂದವುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಆತನಿಗೆ ಕೊಟ್ಟನಲ್ಲಾ.

ಇಬ್ರಿಯರಿಗೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी