ವಿಮೋಚನಕಾಂಡ 38:27

ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 38

25ಪರಿಶುದ್ಧಾಲಯ ನಿಯಮದ ಮೇರೆಗೆ ಸಭೆ ಯವರು ಎಣಿಸಿದ ಬೆಳ್ಳಿಯು ಒಂದು ನೂರು ತಲಾಂತು, ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲು ಗಳಾಗಿತ್ತು.

26ಪರಿಶುದ್ಧಾಲಯ ನಿಯಮದ ಮೇರೆಗೆ ತಲಾ ಒಂದು ಬೆಕಾ, ಅಂದರೆ ಅರ್ಧ ಶೆಕೆಲಿನಂತೆ ಇಪ್ಪತ್ತು ಮೊದಲುಗೊಂಡು ಅದಕ್ಕೆ ಮೇಲಿನ ಪ್ರಾಯ ದವರನ್ನು ಲೆಕ್ಕ ಮಾಡಲಾಗಿ ಆರು ಲಕ್ಷ ಮೂರು ಸಾವಿರದ ಐದು ನೂರ ಐವತ್ತು ಗಂಡಸರ ಸಂಖ್ಯೆ ಇತ್ತು.

27ಪರಿಶುದ್ಧಾಲಯದ ಕುಣಿಕೆಗಳಿಗೆ ಮತ್ತು ತೆರೆಗಳ ಕುಣಿಕೆಗಳಿಗೆ ಎರಕ ಹೊಯ್ಯಲು ಒಂದು ನೂರು ತಲಾಂತು ಬೆಳ್ಳಿ ಹಿಡಿಯಿತು; ಒಂದು ಕುಣಿಕೆಗೆ ಒಂದು ತಲಾಂತಿನಂತೆ ನೂರು ಕುಣಿಕೆಗಳಿಗೆ ನೂರು ತಲಾಂತು ಬೆಳ್ಳಿ ಆಯಿತು.

28ಒಂದು ಸಾವಿರದ ಏಳುನೂರ ಎಪ್ಪತ್ತೈದು ಶೆಕೆಲಿನಿಂದ ಅವನು ಕಂಬಗಳಿಗೆ ಕೊಂಡಿಗಳನ್ನೂ ಕಂಬದ ಬೋದಿಗೆ ಮೇಲ್ಹೊದಿಕೆ ಯನ್ನೂ ಅಲಂಕಾರದ ಪಟ್ಟಿಗಳನ್ನೂ ಮಾಡಿದನು.

29ಕಾಣಿಕೆಯಾಗಿ ಬಂದ ಹಿತ್ತಾಳೆಯು ಎಪ್ಪತ್ತು ತಲಾಂತು ಮತ್ತು ಎರಡು ಸಾವಿರದ ನಾಲ್ಕುನೂರು ಶೆಕೆಲುಗಳಾಗಿತ್ತು.

ವಿಮೋಚನಕಾಂಡ 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी