ಯೆರೆಮಿಯ 28:3

ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 28

1ಅದೇ ವರುಷದಲ್ಲಿ ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಪ್ರಾರಂಭ ದಲ್ಲಿ ನಾಲ್ಕನೇ ವರುಷದ ಐದನೇ ತಿಂಗಳಲ್ಲಿ ಗಿಬ್ಯೋನಿ ನವನಾದ ಅಜ್ಜೂರನ ಮಗನಾದ ಹನನ್ಯನೆಂಬ ಪ್ರವಾ ದಿಯು ಕರ್ತನ ಆಲಯದಲ್ಲಿ ಯಾಜಕರ ಮುಂದೆಯೂ ಜನರೆಲ್ಲರ ಮುಂದೆಯೂ ನನಗೆ ಹೇಳಿದ್ದೇನಂದರೆ --

2ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಬಾಬೆಲಿನ ಅರಸನ ನೊಗವನ್ನು ಮುರಿದಿದ್ದೇನೆ.

3ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು.

4ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು.

5ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ--

ಯೆರೆಮಿಯ 28 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी