ಯೆಹೆಜ್ಕೇಲನು 31:4

ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 31

2ಮನುಷ್ಯಪುತ್ರನೇ, ಐಗುಪ್ತದ ಅರಸನಾದ ಫರೋಹನೊಂದಿಗೆ ಮತ್ತು ಅವನ ಸಮೂಹದೊಂದಿಗೆ ಮಾತ ನಾಡಿ--ನೀನು ನಿನ್ನ ದೊಡ್ಡಸ್ತಿಕೆಯಲ್ಲಿ ಯಾರಿಗೆ ಸಮಾನನಾಗಿರುವೆ?

3ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.

4ನೀರು ಅದನ್ನು ಬೆಳೆಸಿತು, ಅಗಾಧವು ತನ್ನ ನದಿಗಳನ್ನು ಅದರ ಸುತ್ತಲೂ ಹರಿಸಿ ತನ್ನ ಕಾಲುವೆಗಳನ್ನು ಬಯಲಿನ ಮರಗಳಿಗೆಲ್ಲಾ ಕಳುಹಿಸಿ, ಅದನ್ನು ಎತ್ತರವಾಗಿ ಬೆಳೆಯುವಂತೆ ಮಾಡಿತು.

5ಆದ ದರಿಂದ ಅದರ ಎತ್ತರವು ಬಯಲಿನ ಎಲ್ಲಾ ಮರ ಗಳಿಗಿಂತ ಎತ್ತರವಾಗಿತ್ತು; ಅದು ಹಬ್ಬಿದ್ದದರಿಂದ ಮತ್ತು ಹೆಚ್ಚು ನೀರಿನ ದೆಸೆಯಿಂದ ಅದರ ಕೊಂಬೆಗಳು ಅಧಿಕವಾದವು; ಅದರ ರೆಂಬೆಗಳು ಉದ್ದವಾದವು.

6ಅದರ ಕೊಂಬೆಗಳಲ್ಲಿ ಆಕಾಶದ ಎಲ್ಲಾ ಪಕ್ಷಿಗಳು ತಮ್ಮ ಗೂಡುಗಳನ್ನು ಮಾಡಿದವು; ಅದರ ರೆಂಬೆ ಗಳ ಕೆಳಗೆ ಬಯಲಿನ ಎಲ್ಲಾ ಮೃಗಗಳು ಮರಿಗಳಿಗೆ ಜನ್ಮಕೊಟ್ಟವು; ಅದರ ಕೆಳಗೆ ನೆರಳಿನಲ್ಲಿ ಎಲ್ಲಾ ಮಹಾಜನಾಂಗಗಳು ವಾಸಮಾಡಿದವು.

ಯೆಹೆಜ್ಕೇಲನು 31 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी