ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ನೇಮವಿಧಿ ಆಜ್ಞೆ ಕಟ್ಟಳೆಗಳನ್ನು ಕೈಕೊಂಡನು ಅಂದನು.
3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
4ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
5ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ನೇಮವಿಧಿ ಆಜ್ಞೆ ಕಟ್ಟಳೆಗಳನ್ನು ಕೈಕೊಂಡನು ಅಂದನು.
6ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.
7ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ