ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
42ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
43ಆದದರಿಂದ ನಾನು ನಿಮಗೆ ಹೇಳುವದೇನಂದರೆ--ದೇವರ ರಾಜ್ಯವು ನಿಮ್ಮಿಂದ ತೆಗೆಯಲ್ಪಟ್ಟು ಅದರ ಫಲಗಳನ್ನು ಕೊಡುವ ಜನಾಂಗಕ್ಕೆ ಕೊಡಲ್ಪಡುವದು.
44ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
45ಪ್ರಧಾನ ಯಾಜಕರೂ ಫರಿಸಾಯರೂ ಆತನ ಸಾಮ್ಯಗಳನ್ನು ಕೇಳಿ ತಮ್ಮ ವಿಷಯದಲ್ಲಿಯೇ ಆತನು ಅದನ್ನು ಹೇಳಿದನೆಂದು ಅವರು ತಿಳುಕೊಂಡರು.
46ಆದರೆ ಅವರು ಆತನನ್ನು ಹಿಡಿಯುವದಕ್ಕೆ ಪ್ರಯತ್ನಿಸಿದಾಗ ಜನಸಮೂಹಕ್ಕೆ ಭಯಪಟ್ಟರು; ಯಾಕಂದರೆ ಅವರು ಆತನನ್ನು ಪ್ರವಾದಿಯೆಂದು ಎಣಿಸಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ