ಯೆಹೋಶುವ 8:9

ಯೆಹೋ ಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿಗೂ ನಡುವೆ ಆಯಿಗೆ ಪಶ್ಚಿಮದ ಕಡೆ ಇಳುಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಇಳುಕೊಂಡನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 8

7ಆಗ ನೀವು ಹೊಂಚಿಕೊಳ್ಳುವ ಸ್ಥಳದಿಂದ ಎದ್ದು ಬಂದು ಪಟ್ಟಣವನ್ನು ಸ್ವಾಧೀನ ಮಾಡಿಕೊಳ್ಳಬೇಕು; ಯಾಕಂದರೆ ನಿಮ್ಮ ದೇವರಾದ ಕರ್ತನು ಅದನ್ನು ನಿಮ್ಮ ಕೈಗೆ ಒಪ್ಪಿಸಿ ಕೊಡುವನು.

8ನೀವು ಪಟ್ಟಣವನ್ನು ಹಿಡಿದ ತರುವಾಯ ಬೆಂಕಿ ಹಚ್ಚಿ ಅದನ್ನು ಸುಟ್ಟುಬಿಟ್ಟು ಕರ್ತನ ಆಜ್ಞೆಯ ಪ್ರಕಾರವೇ ನೀವು ಮಾಡಬೇಕು. ನೋಡು, ನಾನು ಇದನ್ನು ನಿಮಗೆ ಆಜ್ಞಾಪಿಸಿದೆನು ಅಂದನು.

9ಯೆಹೋ ಶುವನು ಅವರನ್ನು ಕಳುಹಿಸಿದಾಗ ಅವರು ಹೋಗಿ ಹೊಂಚಿಕೊಂಡು ಬೇತೇಲಿಗೂ ಆಯಿಗೂ ನಡುವೆ ಆಯಿಗೆ ಪಶ್ಚಿಮದ ಕಡೆ ಇಳುಕೊಂಡರು. ಆದರೆ ಯೆಹೋಶುವನು ಆ ರಾತ್ರಿ ಜನರ ಮಧ್ಯದಲ್ಲಿ ಇಳುಕೊಂಡನು.

10ಉದಯ ಕಾಲದಲ್ಲಿ ಯೆಹೋಶುವನು ಎದ್ದು ಜನರನ್ನು ಲೆಕ್ಕ ಮಾಡಿ ತಾನೂ ಇಸ್ರಾಯೇಲಿನ ಹಿರಿಯರೂ ಜನರ ಮುಂದೆ ನಡೆದು ಆಯಿಗೆ ಏರಿ ಹೋದರು.

11ಅವನ ಸಂಗಡ ಇದ್ದ ಯುದ್ಧಸ್ಥರೆಲ್ಲಾ ನಡೆದು ಪಟ್ಟಣದ ಸವಿಾಪವಾಗಿ ಬಂದು ಸೇರಿ ಆಯಿಗೆ ಉತ್ತರ ದಿಕ್ಕಿನಲ್ಲಿ ಇಳಿದುಕೊಂಡರು. ಆದರೆ ಆಯಿಗೂ ಅವರಿಗೂ ಮಧ್ಯದಲ್ಲಿ ಒಂದು ತಗ್ಗು ಇತ್ತು.

ಯೆಹೋಶುವ 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी