ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು.
16ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅಂದನು.
17ಆಗ ಆತನ ಶಿಷ್ಯರಲ್ಲಿ ಕೆಲವರು--ಈತನು ನಮಗೆ ಹೇಳುವದೇನು? ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನೀವು ನನ್ನನ್ನು ನೋಡುವಿರಿ; ಯಾಕಂದರೆ ನಾನು ತಂದೆಯ ಬಳಿಗೆ ಹೋಗುತ್ತೇನೆ ಅನ್ನುತ್ತಾನಲಾ ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡ
18ಆದದರಿಂದ ಅವರು--ಈತನು ಹೇಳುವ ಈ ಮಾತೇನು? ಸ್ವಲ್ಪಕಾಲ ಎಂದು ಹೇಳುತ್ತಾನಲ್ಲಾ? ಈತನು ಹೇಳುವದನ್ನು ನಾವು ಅರಿಯೆವು ಅಂದರು.
19ಯೇಸು ತನ್ನನ್ನು ಪ್ರಶ್ನಿಸುವದಕ್ಕೆ ಅಪೇಕ್ಷಿಸುತ್ತಿ ದ್ದಾರೆಂದು ತಿಳಿದು ಅವರಿಗೆ--ಸ್ವಲ್ಪ ಕಾಲವಾದ ಮೇಲೆ ನೀವು ನನ್ನನ್ನು ನೋಡುವದಿಲ್ಲ; ತಿರಿಗಿ ಸ್ವಲ್ಪಕಾಲವಾದ ಮೇಲೆ ನನ್ನನ್ನು ನೋಡುವಿರಿ ಎಂದು ನಾನು ನಿಮಗೆ ಹೇಳಿದ್ದಕ್ಕೆ ನಿಮ್ಮ ನಿಮ್ಮೊಳಗೆ ವಿಚಾರಿಸಿಕೊಳ್ಳುತ್ತೀರೋ?
20ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ