ದಾನಿಯೇಲನು 1:4

ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.

ಸಂದರ್ಭದೊಂದಿಗೆ ಓದಿ · ದಾನಿಯೇಲನು 1

2ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನು, ದೇವಾಲಯದ ಕೆಲವು ಪಾತ್ರೆಗಳನ್ನು ಅವನಿಗೆ ಒಪ್ಪಿಸಿದನು. ಅವನು ಅವುಗಳನ್ನು ಶಿನಾರ್‌ ದೇಶಕ್ಕೂ ತನ್ನ ದೇವರ ಆಲಯಕ್ಕೂ ತಂದು ಪಾತ್ರೆಗಳನ್ನು ತನ್ನ ದೇವರ ಬೊಕ್ಕಸದ ಮನೆಯಲ್ಲಿ ಇರಿಸಿದನು.

3ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ

4ಕಳಂಕ ಇಲ್ಲ ದವರಾಗಿಯೂ ಸುಂದರರಾಗಿಯೂ ಸಕಲ ಜ್ಞಾನದಲ್ಲಿ ಪ್ರವೀಣರಾಗಿಯೂ ತಿಳುವಳಿಕೆಯಲ್ಲಿ ನಿಪುಣರಾ ಗಿಯೂ ಮತ್ತು ವಿಜ್ಞಾನದಲ್ಲಿ ತಿಳುವಳಿಕೆಯುಳ್ಳವ ರಾಗಿಯೂ ಅರಸನ ಅರಮನೆಯಲ್ಲಿ ಸೇವೆಮಾಡಲು ಸಾಮರ್ಥ್ಯವುಳ್ಳವರಾಗಿಯೂ ಇರುವ ಯೌವನಸ್ಥರನ್ನು ತಂದು ಕಸ್ದೀಯರ ವಿದ್ಯೆಯನ್ನೂ ಭಾಷೆಯನ್ನೂ ಅವರಿಗೆ ಬೋಧಿಸಬೇಕೆಂದು ಆಜ್ಞಾಪಿಸಿದನು.

5ಅರಸನು ರಾಜ ಭೋಜನದಲ್ಲಿಯೂ ತಾನು ಕುಡಿಯುವ ದ್ರಾಕ್ಷಾರಸ ದಲ್ಲಿಯೂ ಪ್ರತಿದಿನವೂ ಅವರಿಗೆ ಪಾಲನ್ನು ನೇಮಿ ಸಿದನು; ಹೀಗೆ ಅವರು ಮೂರು ವರುಷಗಳ ಕಾಲ ಪೋಷಿಸಲ್ಪಟ್ಟ ಮೇಲೆ ಅರಸನ ಮುಂದೆ ನಿಲ್ಲತಕ್ಕವರಾಗುವರು.

6ಇವರಲ್ಲಿ ಯೆಹೂದನ ಮಕ್ಕಳೊಳಗಿಂದ ದಾನಿಯೇಲ, ಹನನ್ಯ, ವಿಾಶಾಯೇಲ, ಅಜರ್ಯ ಎಂಬವರಿದ್ದರು.

ದಾನಿಯೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी