೨ ಅರಸುಗಳು 4:42

ಇದಲ್ಲದೆ ಬಾಳ್‌ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 4

40ಜನರಿಗೆ ಅದನ್ನು ತಿನ್ನುವದಕ್ಕೆ ಬಡಿಸಿದರು. ಆಹಾರವನ್ನು ತಿನ್ನುತ್ತಿರುವಾಗ ಏನಾಯಿ ತಂದರೆ, ಅವರು--ದೇವರ ಮನುಷ್ಯನೇ, ಗಡಿಗೆಯಲ್ಲಿ ವಿಷ ಎಂದು ಕೂಗಿದರು. ಯಾಕಂದರೆ ಅದರಲ್ಲಿದ್ದದ್ದನ್ನು ಅವರು ತಿನ್ನಲಾರದೆ ಇದ್ದರು.

41ಆಗ ಅವನು ಹಿಟ್ಟನ್ನು ತಕ್ಕೊಂಡು ಬರ ಹೇಳಿ ಅದನ್ನು ಗಡಿಗೆಯಲ್ಲಿ ಹಾಕಿ ಜನರು ತಿನ್ನುವದಕ್ಕೆ ಬಡಿಸಿರಿ ಅಂದನು. ಆಗ ಆ ಗಡಿಗೆಯಲ್ಲಿ ಕೆಟ್ಟದ್ದೇನೂ ಇರಲಿಲ್ಲ.

42ಇದಲ್ಲದೆ ಬಾಳ್‌ಷಾಲಿಷಾದಿಂದ ಒಬ್ಬ ಮನು ಷ್ಯನು ದೇವರ ಮನುಷ್ಯನಿಗೆ ಮೊದಲ ಫಲವಾದ ಜವೆಗೋದಿಯ ಇಪ್ಪತ್ತು ರೊಟ್ಟಿಗಳನ್ನೂ ಕಾಳಿ ನಿಂದ ತುಂಬಿದ ತೆನೆಗಳನ್ನೂ ತಕ್ಕೊಂಡು ಬಂದನು.

43ಆಗ ಅವನು--ಜನರಿಗೆ ಕೊಡು; ಅವರು ತಿನ್ನಲಿ ಅಂದನು. ಆದರೆ ಅವನ ಸೇವಕನು ಇದನ್ನು ನೂರು ಮಂದಿಗೆ ಬಡಿಸುವದು ಹೇಗೆ ಅಂದನು. ಅದಕ್ಕವನು -- ಜನರಿಗೆ ಕೊಡು; ಅವರು ತಿನ್ನಲಿ; ಅವರು ತಿಂದು ಇನ್ನೂ ಉಳಿಸಿ ಬಿಡುವರೆಂದು ಕರ್ತನು ಹೇಳುತ್ತಾನೆ ಅಂದನು.

44ಹಾಗೆಯೇ ಅವನು ಅವರ ಮುಂದೆ ಇಟ್ಟನು. ಕರ್ತನ ವಾಕ್ಯದ ಪ್ರಕಾರ ಅವರು ತಿಂದು ಉಳಿಸಿಟ್ಟರು.

೨ ಅರಸುಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी