ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
3ಆದರೆ ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದ ಮಗನಾಗಿ ದ್ದರಿಂದ ಅವನು ತನ್ನ ಎಲ್ಲಾ ಮಕ್ಕಳಿಗಿಂತ ಅವನನ್ನು ಹೆಚ್ಚು ಪ್ರೀತಿಮಾಡಿ ಅವನಿಗೆ ಅನೇಕ ಬಣ್ಣದ ಅಂಗಿ ಯನ್ನು ಮಾಡಿಸಿದನು.
4ತಮ್ಮ ತಂದೆಯು ಅವನನ್ನು ಅವನ ಎಲ್ಲಾ ಸಹೋದರರಿಗಿಂತ ಹೆಚ್ಚು ಪ್ರೀತಿ ಮಾಡುತ್ತಾನೆಂದು ಅವನ ಸಹೋದರರು ನೋಡಿ ಅವನನ್ನು ದ್ವೇಷಿಸಿ ಅವನ ಸಂಗಡ ಸಮಾಧಾನವಾಗಿ ಮಾತಾಡಲಾರದೆ ಇದ್ದರು.
5ಯೋಸೇಫನು ಒಂದು ಕನಸನ್ನು ಕಂಡು ತನ್ನ ಸಹೋದರರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
6ಅವನು ಅವರಿಗೆ ನಾನು ಕಂಡ ಈ ಕನಸನ್ನು ಹೇಳುತ್ತೇನೆ, ಕೇಳಿರಿ.
7ಇಗೋ, ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು; ಆಗ ಇಗೋ, ನನ್ನ ಸಿವುಡು ಎದ್ದು ನಿಂತಿತು; ಆಗ ಇಗೋ, ನಿಮ್ಮ ಸಿವುಡುಗಳು ತಿರುಗಿ ಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ