೨ ಸಮುವೇಲನು 3:25

ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 3

23ಯೋವಾಬನೂ ಅವನ ಸಂಗಡ ಇದ್ದ ಸೈನ್ಯವೂ ಬಂದಾಗ ಅವರು ಯೋವಾಬನಿಗೆ--ನೇರನ ಮಗನಾದ ಅಬ್ನೇರನು ಅರಸನ ಬಳಿಗೆ ಬಂದನು; ಅವನು ಇವನನ್ನು ಕಳುಹಿಸಿಬಿಟ್ಟದ್ದರಿಂದ ಸಮಾಧಾನವಾಗಿ ಹೋಗಿದ್ದಾನೆ ಅಂದರು.

24ಆಗ ಯೋವಾಬನು ಅರಸನ ಬಳಿಗೆ ಬಂದು--ಏನು ಮಾಡಿದಿ? ಇಗೋ, ಅಬ್ನೇರನು ನಿನ್ನ ಬಳಿಗೆ ಬಂದನು; ಅವನು ಹೋಗಿಬಿಡುವ ಹಾಗೆ ನೀನು ಅವನನ್ನು ಕಳುಹಿಸಿಬಿಟ್ಟದ್ದು ಯಾಕೆ?

25ನೇರನ ಮಗನಾದ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಹೊರಡು ವಿಕೆಯನ್ನೂ ಬರುವಿಕೆಯನ್ನೂ ತಿಳಿಯುವಂತೆಯೂ ನೀನು ಮಾಡುವದನ್ನೆಲ್ಲಾ ತಿಳಿಯುವದಕ್ಕೂ ಬಂದಿದ್ದನು ಅಂದನು.

26ಯೋವಾಬನು ದಾವೀದನನ್ನು ಬಿಟ್ಟು ಹೊರಟುಬಂದು ಅವನು ಅಬ್ನೇರನ ಹಿಂದೆ ದೂತರನ್ನು ಕಳುಹಿಸಿದನು; ಅವರು ಅವನನ್ನು ಸಿರಾ ಬಾವಿಯ ಬಳಿಯಿಂದ ತಿರಿಗಿ ಕರಕೊಂಡು ಬಂದರು. ಆದರೆ ದಾವೀದನಿಗೆ ಅದು ತಿಳಿಯದೆ ಇತ್ತು.

27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.

೨ ಸಮುವೇಲನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी