ಅಪೊಸ್ತಲರ ಕೃತ್ಯಗಳು 3:23

ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 3

21ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.

22ಯಾಕಂದರೆ ಪಿತೃಗಳಿಗೆ ಮೋಶೆಯು ನಿಜವಾಗಿಯೂ ಹೇಳಿದ್ದೇನಂದರೆ--ನನ್ನ ಹಾಗೆ ಒಬ್ಬ ಪ್ರವಾದಿಯನ್ನು ನಿಮ್ಮ ಸಹೋದರರಲ್ಲಿ ನಿಮ್ಮ ದೇವರಾದ ಕರ್ತನು ನಿಮಗಾಗಿ ಎಬ್ಬಿಸುವನು; ಆತನು ನಿಮಗೆ ಹೇಳುವ ಎಲ್ಲಾ ವಿಷಯಗಳಿಗೆ ನೀವು ಕಿವಿಗೊಡತಕ್ಕದ್ದು;

23ಆ ಪ್ರವಾದಿಗೆ ಕಿವಿಗೊಡದಿರುವ ಪ್ರತಿಯೊಬ್ಬನೂ ಜನ ರೊಳಗಿಂದ ನಾಶವಾಗುವನು ಎಂಬದು.

24ಹೌದು, ಸಮುವೇಲನು ಮೊದಲುಗೊಂಡು ಎಲ್ಲಾ ಪ್ರವಾದಿ ಗಳೂ ತರುವಾಯ ಬಂದು ಮಾತನಾಡಿದವರೆಲ್ಲರೂ ಈ ದಿವಸಗಳ ವಿಷಯವಾಗಿ ಅದರಂತೆಯೇ ಮುಂತಿಳಿ ಸಿದರು.

25ಇದಲ್ಲದೆ ಅಬ್ರಹಾಮನಿಗೆ--ನಿನ್ನ ಸಂತ ತಿಯ ಮೂಲಕ ಭೂಲೋಕದ ಎಲ್ಲಾ ಕುಲದವರು ಆಶೀರ್ವದಿಸಲ್ಪಡುವರು ಎಂದು ದೇವರು ನಮ್ಮ ಪಿತೃಗಳೊಂದಿಗೆ ಮಾಡಿದ ಒಡಂಬಡಿಕೆಯ ಮಕ್ಕಳೂ ಪ್ರವಾದಿಗಳ ಮಕ್ಕಳೂ ನೀವಾಗಿದ್ದೀರಿ.

ಅಪೊಸ್ತಲರ ಕೃತ್ಯಗಳು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी