ಕೊಲೊಸ್ಸೆಯವರಿಗೆ 2:7

ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 2

5ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮದಿಂದ ನಿಮ್ಮೊಂದಿಗಿದ್ದು ನೀವು ಕ್ರಮ ವಾಗಿ ನಡೆಯುವದನ್ನೂ ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವದನ್ನೂ ನೋಡಿ ಸಂತೋಷಪಡುತ್ತೇನೆ.

6ಆದದರಿಂದ ನೀವು ಕರ್ತನಾದ ಕ್ರಿಸ್ತ ಯೇಸುವನ್ನು ಅಂಗೀಕರಿಸಿದಂತೆಯೇ ಆತನಲ್ಲಿದ್ದವರಾಗಿ ನಡೆದು ಕೊಳ್ಳಿರಿ.

7ಆತನಲ್ಲಿ ಬೇರೂರಿಕೊಂಡು ದೃಢವಾಗಿ ನಿಮಗೆ ಕಲಿಸಿದ ಪ್ರಕಾರವೇ ನಂಬಿಕೆಯಲ್ಲಿ ನೆಲೆಗೊಂಡು ಕೃತಜ್ಞತೆಯಿಂದೊಡಗೂಡಿ ಅದರಲ್ಲಿ ಅಭಿವೃದ್ದಿ ಹೊಂದಿರಿ.

8ಕ್ರಿಸ್ತನನ್ನು ಅನುಸರಿಸದೆ ಮನುಷ್ಯರ ಸಂಪ್ರದಾಯಗಳನ್ನೂ ಪ್ರಾಪಂಚಿಕ ಬಾಲಬೋಧೆಯನ್ನೂ ಅನುಸರಿಸುವವರು ನಿಮ್ಮಲ್ಲಿ ಬಂದು ಮೋಸವಾದ ನಿರರ್ಥಕ ತತ್ವಜ್ಞಾನ ಬೋಧನೆ ಯಿಂದ ನಿಮ್ಮನ್ನು ಕೆಡಿಸಿಬಿಟ್ಟಾರು, ಎಚ್ಚರಿಕೆಯಾಗಿರ್ರಿ.

9ಕ್ರಿಸ್ತನಲ್ಲಿಯೇ ದೈವತ್ವ ಸರ್ವಸಂಪೂರ್ಣತೆಯು ಶಾರೀ ರಕವಾಗಿ ವಾಸಮಾಡುತ್ತದೆ.

ಕೊಲೊಸ್ಸೆಯವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी