೧ ಸಮುವೇಲನು 13:8

ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 13

6ಆಗ ಇಸ್ರಾಯೇಲ್‌ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.

7ಇದಲ್ಲದೆ ಇಬ್ರಿಯರಲ್ಲಿರುವ ಕೆಲವರು ಯೊರ್ದನನ್ನು ದಾಟಿ ಗಾದ್‌ ದೇಶಕ್ಕೂ ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು; ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.

8ಸೌಲನು ತನಗೆ ಸಮುವೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುವೇಲನು ಗಿಲ್ಗಾಲಿಗೆ ಬಾರದೆ ಇದ್ದದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.

9ಆಗ ಸೌಲನು--ದಹನ ಬಲಿಯನ್ನೂ ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.

10ಅವನು ದಹನಬಲಿಯನ್ನು ಅರ್ಪಿಸಿ ತೀರಿಸುವಷ್ಟರೊಳಗೆ ಇಗೋ, ಸಮುವೇಲನು ಬಂದನು. ಆಗ ಸೌಲನು ಅವನನ್ನು ವಂದಿಸುವದಕ್ಕಾಗಿ ಎದುರುಗೊಳ್ಳಲು ಹೋದನು.

೧ ಸಮುವೇಲನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी