೨ ಪೇತ್ರನು 1:3

ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.

ಸಂದರ್ಭದೊಂದಿಗೆ ಓದಿ · ೨ ಪೇತ್ರನು 1

1ಯೇಸು ಕ್ರಿಸ್ತನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ನೀತಿಯಿಂದ ನಮ್ಮೊಂದಿಗೆ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ--

2ದೇವರ ವಿಷಯವಾಗಿಯೂ ನಮ್ಮ ಕರ್ತನಾದ ಯೇಸುವಿನ ವಿಷಯವಾಗಿಯೂ ಪರಿಜ್ಞಾನವು ನಿಮಗೆ ಉಂಟಾಗುವದರಲ್ಲಿ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.

3ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು.

4ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.

5ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ

೨ ಪೇತ್ರನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी