ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು.
10ಅದು ರಾತ್ರಿಯಲ್ಲಾದರೂ ಇಲ್ಲವೆ ಹಗಲಿನಲ್ಲಾದರೂ ಆರು ವದಿಲ್ಲ; ಅದರ ಹೊಗೆಯು ನಿರಂತರವಾಗಿ ಏಳುತ್ತಿರು ವದು; ಅದು ತಲತಲಾಂತರಕ್ಕೂ ಹಾಳಾಗಿ ಬಿದ್ದಿರು ವದು; ಅದನ್ನು ಎಂದೆಂದಿಗೂ ಯಾರೂ ಹಾದು ಹೋಗರು.
11ಆದರೆ ಬಕ ಪಕ್ಷಿಯು ಮತ್ತು ಮುಳ್ಳು ಹಂದಿಯು ಅದನ್ನು ಆವರಿಸಿಕೊಳ್ಳುವವು; ಗೂಬೆ ಮತ್ತು ಕಾಗೆಗಳು ಸಹ ಅಲ್ಲಿ ವಾಸಿಸುವವು; ಗಲಿಬಿಲಿ ಯೆಂಬ ನೂಲನ್ನು ಶೂನ್ಯವೆಂಬ ಗಟ್ಟಿ ತೂಕವನ್ನು ಆತನು ಅದರ ಮೇಲೆ ಎಳೆಯುವನು.
12ಅವರ ರಾಜ್ಯಕ್ಕೆ ಪ್ರಮುಖರನ್ನು ಕರೆಯುವರು; ಆದರೆ ಅಲ್ಲಿ ಯಾರೂ ಇರುವದಿಲ್ಲ; (ಅದರ) ಅವಳ ಪ್ರಭುಗಳು ಇಲ್ಲದಂತಾಗುವರು.
13ಅವಳ ಅರಮನೆಗಳಲ್ಲಿ ಮುಳ್ಳುಗಳು ಬೆಳೆಯುವವು; ಅವಳ ಕೋಟೆಗಳಲ್ಲಿ ತುರುಚಿಯೂ ದತ್ತೂರಿಯೂ ಇರುವವು; ಅದು (ಉಷ್ಟ್ರ ಪಕ್ಷಿಗಳ) ಸರ್ಪಗಳ ನಿವಾಸವೂ ಗೂಬೆಗಳಿಗೆ ಸ್ಥಾನವೂ ಆಗುವದು.
14ಮರುಭೂಮಿಯ ಕಾಡು ಮೃಗಗಳು ಸಹ ದ್ವೀಪದ ಕಾಡುಮೃಗಗಳೊಂದಿಗೆ ಸಂಧಿಸುವವು; ದೆವ್ವವು ತನ್ನ ಜೊತೆಯನ್ನು ಕೂಗು ವದು; ಅಲ್ಲಿ ಚೀರುಗೂಬೆಯು ಸಹ ವಿಶ್ರಮಿಸಿಕೊಂಡು ಉಪಶಮನ ಸ್ಥಳವನ್ನು ಕಂಡುಕೊಳ್ಳುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ