ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
19ಇದಲ್ಲದೆ ನಿನ್ನ ದೇವರ ಆಲಯದ ಸೇವೆಯ ನಿಮಿತ್ತವಾಗಿ ನಿನಗೆ ಕೊಡಲ್ಪಟ್ಟ ಪಾತ್ರೆಗಳನ್ನು ನೀನು ಯೆರೂಸಲೇಮಿನ ದೇವರ ಮುಂದೆ ಒಪ್ಪಿಸಿಬಿಡು.
20ಇನ್ನು ಏನಾದರೂ ನಿನ್ನ ದೇವರ ಆಲಯಕ್ಕೋಸ್ಕರ ಅಗತ್ಯವಿದ್ದು ನೀನು ಕೊಡಬೇಕಾಗಿ ಬಂದರೆ ಅದನ್ನು ಅರಸನ ಬೊಕ್ಕಸದಿಂದ ತಕ್ಕೊಂಡುಕೊಡು.
21ಇದಲ್ಲದೆ ಅರಸನಾಗಿರುವ ಆರ್ತಷಸ್ತನಾದ ನಾನು ನದಿಯ ಆಚೆಯಲ್ಲಿರುವ ಎಲ್ಲಾ ಬೊಕ್ಕಸದವ ರಿಗೆ ಕೊಡುವ ಅಪ್ಪಣೆ ಏನಂದರೆ--
22ಪರಲೋಕದ ದೇವರ ನ್ಯಾಯಪ್ರಮಾಣದ ಶಾಸ್ತ್ರಿಯಾಗಿರುವ ಯಾಜ ಕನಾದ ಎಜ್ರನು ನಿಮ್ಮಿಂದ ಏನಾದರೂ ಕೇಳಿದರೆ ಬೆಳ್ಳಿಯು ನೂರು ತಲಾಂತಿನ ಮಟ್ಟಿಗೂ ಗೋಧಿಯು ನೂರು ಕೊಳಗದ ಮಟ್ಟಿಗೂ ದ್ರಾಕ್ಷಾರಸವು ನೂರು ಬುದ್ದಲಿಯ ವರೆಗೂ ಎಣ್ಣೆಯು ನೂರು ಬುದ್ದಲಿಯ ವರೆಗೂ ಉಪ್ಪು ಬೇಕಾದಷ್ಟು ತ್ವರೆಯಾಗಿ ಕೊಡಲ್ಪಡಲಿ.
23ಪರಲೋಕದ ದೇವರಿಂದ ಏನಾದರೂ ಆಜ್ಞಾಪಿಸ ಲ್ಪಟ್ಟರೆ ಅದು ಪರಲೋಕದ ದೇವರ ಆಲಯಕ್ಕೋಸ್ಕರ ಜಾಗ್ರತೆಯಾಗಿ ಮಾಡಲ್ಪಡಲಿ. ಯಾಕಂದರೆ ಅರಸನೂ ಅವನ ಕುಮಾರರೂ ಆಳುವ ರಾಜ್ಯದ ಮೇಲೆ ರೌದ್ರ ಯಾಕೆ ಇರಬೇಕು?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ