ಧರ್ಮೋಪದೇಶಕಾಂಡ 24:9

ನೀವು ಐಗುಪ್ತದಿಂದ ಹೊರಗೆ ಬರುವಾಗ ನಿನ್ನ ದೇವರಾದ ಕರ್ತನು ಮಿರ್ಯಾಮಳಿಗೆ ಮಾರ್ಗದಲ್ಲಿ ಮಾಡಿದ್ದನ್ನು ಜ್ಞಾಪಕಮಾಡಿಕೋ.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 24

7ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.

8ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;

9ನೀವು ಐಗುಪ್ತದಿಂದ ಹೊರಗೆ ಬರುವಾಗ ನಿನ್ನ ದೇವರಾದ ಕರ್ತನು ಮಿರ್ಯಾಮಳಿಗೆ ಮಾರ್ಗದಲ್ಲಿ ಮಾಡಿದ್ದನ್ನು ಜ್ಞಾಪಕಮಾಡಿಕೋ.

10ನೀನು ನಿನ್ನ ನೆರೆಯವನಿಗೆ ಯಾವದೊಂದು ಕೈಗಡ ಕೊಟ್ಟರೆ ಅವನ ಒತ್ತೆಯನ್ನು ಕೇಳುವ ಹಾಗೆ ಅವನ ಮನೆಯಲ್ಲಿ ಪ್ರವೇಶಿಸಬಾರದು.

11ನೀನು ಹೊರಗೆ ನಿಂತಿರಬೇಕು; ನೀನು ಕೈಗಡ ಕೊಟ್ಟ ಮನುಷ್ಯನು ಒತ್ತೆಯನ್ನು ನಿನಗೆ ಹೊರಗೆ ತರಬೇಕು.

ಧರ್ಮೋಪದೇಶಕಾಂಡ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी