೨ ಸಮುವೇಲನು 7:14

ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 7

12ಇದಲ್ಲದೆ ಕರ್ತನು ನಿನಗೆ ತಿಳಿಸುವದೇನಂದರೆ, ನಾನು ನಿನಗೆ ಮನೆಯನ್ನು ಕಟ್ಟುವೆನು. ನಿನ್ನ ದಿವಸಗಳು ಪೂರ್ತಿ ಯಾಗಿ ನೀನು ನಿನ್ನ ಪಿತೃಗಳ ಸಂಗಡ ಮಲಗಿಕೊಂಡಿ ರುವಾಗ ನಿನ್ನ ಕರುಳುಗಳಿಂದ ಹೊರಡುವ ನಿನ್ನ ಸಂತತಿಯನ್ನು ನಿನ್ನ ತರುವಾಯ ಎಬ್ಬಿಸಿ ನಾನು ಅವನ ರಾಜ್ಯವನ್ನು ಸ್ಥಿರಮಾಡುವೆನು.

13ಅವನು ನನ್ನ ಹೆಸ ರಿಗೆ ಮನೆಯನ್ನು ಕಟ್ಟುವನು; ನಾನು ಅವನ ರಾಜ್ಯದ ಸಿಂಹಾಸನವನ್ನು ಸದಾಕಾಲಕ್ಕೂ ಸ್ಥಿರಮಾಡುವೆನು. ನಾನು ಅವನ ತಂದೆಯಾಗಿರುವೆನು; ಅವನು ನನ್ನ ಮಗನಾಗಿರುವನು.

14ಅವನು ಕೆಟ್ಟತನ ಮಾಡಿದರೆ ನಾನು ಅವನನ್ನು ಮನುಷ್ಯರ ಕೋಲಿನಿಂದಲೂ ಮನುಷ್ಯರ ಮಕ್ಕಳ ಪೆಟ್ಟುಗಳಿಂದಲೂ ದಂಡಿಸುವೆನು.

15ಆದರೆ ನಾನು ನಿನ್ನ ಮುಂದೆ ತೊರೆದುಬಿಟ್ಟ ಸೌಲ ನಿಂದ ನನ್ನ ಕೃಪೆಯನ್ನು ನಾನು ತೊಲಗಿಸಿದ ಹಾಗೆ ಅವನಿಂದ ತೊಲಗಿಸುವದಿಲ್ಲ.

16ನಿನ್ನ ಮನೆಯೂ ನಿನ್ನ ರಾಜ್ಯವೂ ನಿನ್ನ ಮುಂದೆ ಸದಾಕಾಲಕ್ಕೂ ಸ್ಥಿರಮಾಡಲ್ಪಡುವವು; ನಿನ್ನ ಸಿಂಹಾಸನವು ಯುಗ ಯುಗಾಂತರಕ್ಕೂ ಶಾಶ್ವತವಾಗಿರುವದು ಎಂದು ಹೇಳಿ ದನು.

೨ ಸಮುವೇಲನು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी