ಲೂಕನು 14:26

ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.

ಸಂದರ್ಭದೊಂದಿಗೆ ಓದಿ · ಲೂಕನು 14

24ಕರೆಯಲ್ಪಟ್ಟ ಆ ಜನರಲ್ಲಿ ಒಬ್ಬ ನಾದರೂ ನನ್ನ ಔತಣವನ್ನು ರುಚಿನೋಡಬಾರದು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.

25ಇದಲ್ಲದೆ ದೊಡ್ಡ ಸಮೂಹಗಳು ಆತನ ಸಂಗಡ ಹೋಗುತ್ತಿರಲು ಆತನು ತಿರುಗಿಕೊಂಡು ಅವರಿಗೆ--

26ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.

27ಯಾವನಾದರೂ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನ ಹಿಂದೆಬಾರದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.

28ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ?

ಲೂಕನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी