ನ್ಯಾಯಸ್ಥಾಪಕರು 11:29

ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್‌ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 11

27ಆದದರಿಂದ ನಾನು ನಿನಗೆ ವಿರೋಧವಾಗಿ ಪಾಪಮಾಡಲಿಲ್ಲ. ನೀನೇ ನನ್ನ ಮೇಲೆ ಯುದ್ಧಮಾಡುವದರಿಂದ ನನಗೆ ಕೆಟ್ಟದ್ದನ್ನು ಮಾಡುತ್ತೀ. ನ್ಯಾಯಾಧಿಪತಿಯಾದ ಕರ್ತನು ಈಹೊತ್ತು ಇಸ್ರಾ ಯೇಲ್‌ ಮಕ್ಕಳಿಗೂ ಅಮ್ಮೋನನ ಮಕ್ಕಳಿಗೂ ಮಧ್ಯ ದಲ್ಲಿ ನ್ಯಾಯತೀರಿಸಲಿ.

28ಹೀಗಿದ್ದರೂ ಯೆಪ್ತಾಹನು ಹೇಳಿ ಕಳುಹಿಸಿದ ಮಾತನ್ನು ಅಮ್ಮೋನನ ಅರಸನು ಕೇಳದೆ ಹೋದನು.

29ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್‌ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.

30ಯೆಪ್ತಾಹನು ಕರ್ತನಿಗೆ ಒಂದು ಪ್ರಮಾಣವನ್ನು ಮಾಡಿ--ನೀನು ಅಮ್ಮೋನನ ಮಕ್ಕಳನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ

31ನಾನು ಅಮ್ಮೋನನ ಮಕ್ಕಳ ಬಳಿಯಿಂದ ಸಮಾಧಾನದಲ್ಲಿ ತಿರಿಗಿ ಬರುವಾಗ ನನ್ನ ಮನೆಯ ಬಾಗಲಿಂದ ನನ್ನನ್ನು ಎದುರುಗೊಳ್ಳಲು ಬರುವಂಥದ್ದು ನಿಜವಾಗಿ ಕರ್ತನದಾಗಿರುವದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು ಅಂದನು.

ನ್ಯಾಯಸ್ಥಾಪಕರು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी