ರೋಮಾಪುರದವರಿಗೆ 13:11

ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 13

9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.

10ಪ್ರೀತಿಯು ತನ್ನ ನೆರೆಯವನಿಗೆ ಯಾವ ಕೇಡನ್ನೂ ಮಾಡುವದಿಲ್ಲ. ಆದಕಾರಣ ಪ್ರೀತಿ ಯಿಂದಲೇ ನ್ಯಾಯಪ್ರಮಾಣವು ನೆರವೇರುತ್ತದೆ.

11ಈಗ ನಿದ್ರೆಯಿಂದ ಎಚ್ಚರವಾಗತಕ್ಕ ಕಾಲವೆಂದು ಅರಿತುಕೊಳ್ಳಿರಿ; ನಾವು ಮೊದಲು ನಂಬಿದ ಕಾಲದಲ್ಲಿ ಇದ್ದದ್ದಕ್ಕಿಂತ ಈಗ ನಮ್ಮ ರಕ್ಷಣೆಯು ಹತ್ತಿರವಾಯಿತು.

12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸವಿಾಪವಾಯಿತು; ಆದದರಿಂದ ನಾವು ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ಆಯುಧಗಳನ್ನು ಧರಿಸಿಕೊಳ್ಳೋಣ.

13ದುಂದೌತನ ಕುಡಿಕತನಗಳಲ್ಲಾಗಲಿ ಕಾಮವಿಲಾಸ ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೇಕಿಚ್ಚು ಗಳಲ್ಲಿಯಾಗಲಿ ಇರದೆ ಹಗಲು ಹೊತ್ತಿಗೆ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.

ರೋಮಾಪುರದವರಿಗೆ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी