ಯೆರೆಮಿಯ 25:16

ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 25

14ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ.

15ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ.

16ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು.

17ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು.

18ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು.

ಯೆರೆಮಿಯ 25 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी