೨ ಅರಸುಗಳು 4:35

ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 4

33ಅವನು ಒಳಗೆ ಪ್ರವೇ ಶಿಸಿ ಯಾರೂ ಒಳಗೆ ಬಾರದಂತೆ ಆ ಕೋಣೆಯ ಬಾಗಲು ಮುಚ್ಚಿಕೊಂಡು ಕರ್ತನನ್ನು ಪ್ರಾರ್ಥಿಸಿದನು.

34ಅವನು ಏರಿಹೋಗಿ ಮಗುವಿನ ಮೇಲೆ ಮಲಗಿ ಕೊಂಡು ತನ್ನ ಬಾಯಿಯನ್ನು ಅವನ ಬಾಯಿಯ ಮೇಲೆಯೂ ತನ್ನ ಕಣ್ಣುಗಳನ್ನು ಅವನ ಕಣ್ಣುಗಳ ಮೇಲೆಯೂ ತನ್ನ ಕೈಗಳನ್ನು ಅವನ ಕೈಗಳ ಮೇಲೆಯೂ ಇರಿಸಿದನು. ಅವನು ಮೇಲೆ ಬೋರ್ಲಬಿದ್ದದರಿಂದ ಮಗುವಿನ ಶರೀರವು ಬೆಚ್ಚಗೆ ಆಯಿತು.

35ಆಗ ಅವನು ತಿರುಗಿ ಬಂದು ಮನೆಯಲ್ಲಿ ಸ್ವಲ್ಪಹೊತ್ತು ಅತ್ತಿತ್ತ ತಿರುಗಾಡಿ ಏರಿಹೋಗಿ ಅವನ ಮೇಲೆ ಬೋರ್ಲ ಬಿದ್ದನು. ಆಗ ಆ ಹುಡುಗನು ಏಳು ಸಾರಿ ಸೀತು ತರುವಾಯ ತನ್ನ ಕಣ್ಣುಗಳನ್ನು ತೆರೆದನು.

36ಆಗ ಅವನು ಗೇಹಜಿಯನ್ನು ಕರೆದು--ಶೂನೇಮ್ಯಳನ್ನು ಕರೆ ಅಂದನು. ಅವನು ಅವಳನ್ನು ಕರೆದನು. ಅವಳು ಬಂದಾಗ ಅವನು--ನಿನ್ನ ಕುಮಾರನನ್ನು ತಕ್ಕೊಂಡು ಹೋಗು ಅಂದನು.

37ಆಗ ಅವಳು ಬಂದು ಅವನ ಪಾದಗಳ ಮೇಲೆ ಬಿದ್ದು ಸಾಷ್ಟಾಂಗ ನಮಸ್ಕಾರ ಮಾಡಿ ತನ್ನ ಮಗನನ್ನು ಎತ್ತಿಕೊಂಡು ಹೋದಳು.

೨ ಅರಸುಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी