ಯಾಕೋಬನು 5:13

ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.

ಸಂದರ್ಭದೊಂದಿಗೆ ಓದಿ · ಯಾಕೋಬನು 5

11ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಎಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣೆಯುಳ್ಳ ವನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.

12ಮುಖ್ಯವಾಗಿ ನನ್ನ ಸಹೋದರರೇ, ಆಣೆ ಇಡಲೇ ಬೇಡಿರಿ; ಆಕಾಶದ ಮೇಲಾಗಲಿ ಭೂಮಿಯ ಮೇಲಾಗಲಿ ಇನ್ನಾವದರ ಮೇಲಾಗಲಿ ಆಣೆ ಇಡ ಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವದಿಲ್ಲ.

13ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.

14ನಿಮ್ಮಲ್ಲಿ ಯಾವ ನಾದರೂ ಅಸ್ವಸ್ಥನಾಗಿರುವವನು ಇದ್ದಾನೋ? ಅವನು ಸಭೆಯ ಹಿರಿಯರನ್ನು ಕರೇಕಳುಹಿಸಲಿ; ಅವರು ಕರ್ತನ ಹೆಸರಿನಿಂದ ಎಣ್ಣೆಹಚ್ಚಿ ಅವನಿಗೋಸ್ಕರ ಪ್ರಾರ್ಥಿಸಲಿ.

15ನಂಬಿಕೆಯಿಂದ ಮಾಡಿದ ಪ್ರಾರ್ಥನೆ ಯು ರೋಗಿಯನ್ನು ರಕ್ಷಿಸುವದು; ಕರ್ತನು ಅವನನ್ನು ಎಬ್ಬಿಸುವನು, ಪಾಪಗಳನ್ನು ಮಾಡಿದವನಾಗಿದ್ದರೆ ಅವು ಕ್ಷಮಿಸಲ್ಪಡುವವು.

ಯಾಕೋಬನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी