೨ ಕೊರಿಂಥದವರಿಗೆ 7:7

ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.

ಸಂದರ್ಭದೊಂದಿಗೆ ಓದಿ · ೨ ಕೊರಿಂಥದವರಿಗೆ 7

5ನಾವು ಮಕೆದೋನ್ಯಕ್ಕೆ ಬಂದಾಗ ನಮ್ಮ ಶರೀರಕ್ಕೆ ಏನೂ ವಿಶ್ರಾಂತಿಯಾಗಲಿಲ್ಲ; ಆದರೆ ಎಲ್ಲಾ ಕಡೆಯಲ್ಲಿಯೂ ನಮಗೆ ಕಳವಳವಿತ್ತು ಹೊರಗೆ ಕಲಹ; ಒಳಗೆ ಭಯವಿತ್ತು.

6ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.

7ಅವನ ಬರುವಿಕೆಯಿಂದಮಾತ್ರವಲ್ಲದೆ ಅವನು ನಿಮ್ಮ ಯಥಾರ್ಥವಾದ ಹಂಬಲ, ನಿಮ್ಮ ಗೋಳಾಟ, ನನ್ನ ಕಡೆಗಿರುವ ನಿಮ್ಮ ಆಸಕ್ತಿಯ ಮನಸ್ಸು ಮತ್ತು ತಾನು ನಿಮ್ಮಲ್ಲಿ ಹೊಂದಿದ ಆದರಣೆ ಇವುಗಳನ್ನು ನಮಗೆ ತಿಳಿಸಿದಾಗ ನಾನು ಹೆಚ್ಚಾಗಿ ಸಂತೋಷಪಟ್ಟೆನು.

8ನಾನು ಪತ್ರದಿಂದ ನಿಮ್ಮನ್ನು ದುಃಖಪಡಿಸಿದಕ್ಕೆ ನನಗೆ ವ್ಯಸನವಾದರೂ ನಾನು ಪಶ್ಚಾತ್ತಾಪಪಡು ವದಿಲ್ಲ, ಯಾಕಂದರೆ ಆ ಪತ್ರಿಕೆಯು ನಿಮ್ಮನ್ನು ದುಃಖ ಪಡಿಸಿದಾಗ್ಯೂ ಅದು ಸ್ವಲ್ಪ ಕಾಲಕ್ಕೆ ಎಂದು ನಾನು ತಿಳಿಯುತ್ತೇನೆ.

9ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ.

೨ ಕೊರಿಂಥದವರಿಗೆ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी