ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
24ಜಗತ್ತನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಉಂಟುಮಾಡಿದ ದೇವರು ಭೂಮ್ಯಾಕಾಶಗಳ ಒಡೆಯ ನಾಗಿರುವದರಿಂದ ಕೈಯಿಂದ ಕಟ್ಟಿರುವ ಗುಡಿಗಳಲ್ಲಿ ವಾಸಮಾಡುವಾತನಲ್ಲ.
25ಇಲ್ಲವೆ ತಾನೇ ಎಲ್ಲರಿಗೆ ಜೀವವನ್ನು ಶ್ವಾಸವನ್ನು ಎಲ್ಲವನ್ನು ಕೊಡುವಾತ ನಾಗಿರಲಾಗಿ ಕೊರತೆಯಿದ್ದವನಂತೆ ಮನುಷ್ಯರ ಕೈಗಳಿಂದ ಆರಾಧನೆ ಹೊಂದುವಾತನಲ್ಲ;
26ಆತನು ಒಂದೇ ರಕ್ತದಿಂದ ಎಲ್ಲಾ ಜನಾಂಗಗಳ ಮನುಷ್ಯರನ್ನು ಭೂಮುಖದ ಮೇಲೆಲ್ಲಾ ವಾಸಿಸುವದಕ್ಕಾಗಿ ಉಂಟು ಮಾಡಿದನು.
27ಆತನು ನಮ್ಮಲ್ಲಿ ಒಬ್ಬನಿಗೂ ದೂರ ವಾದವನಲ್ಲದಿದ್ದರೂ ಅವರು ಕರ್ತನನ್ನು ತಡವಾಡಿ ಕಂಡುಕೊಂಡಾರೇನೋ ಎಂದು ಮೊದಲೇ ನೇಮಕ ವಾದ ಕಾಲಗಳನ್ನೂ ಅವರ ನಿವಾಸದ ಮೇರೆಗಳನ್ನೂ ನಿಶ್ಚಯಿಸಿದನು.
28ಆತನಲ್ಲಿಯೇ ನಾವು ಜೀವಿಸುತ್ತೇವೆ ಚಲಿಸುತ್ತೇವೆ ಇರುತ್ತೇವೆ. ನಿಮ್ಮ ಸ್ವಂತ ಕವಿಗಳಲ್ಲಿಯೂ ಕೆಲವರು--ನಾವೂ ಆತನ ಸಂತಾನದವರೇ ಎಂಬ ದಾಗಿ ಹೇಳಿದ್ದಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ