ಯೆಹೋಶುವ 7:11

ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆಹೋಶುವ 7

9ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.

10ಆಗ ಕರ್ತನು ಯೆಹೋಶುವನಿಗೆ--ನೀನು ಎದ್ದೇಳು; ನೀನು ಈ ಪ್ರಕಾರ ಬೋರಲು ಬಿದ್ದಿರುವ ದೇನು?

11ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.

12ಆದದ ರಿಂದ ಇಸ್ರಾಯೇಲ್‌ ಮಕ್ಕಳು ತಮ್ಮ ಶತ್ರುಗಳ ಮುಂದೆ ನಿಲ್ಲಲಾರದೆ ತಮ್ಮ ಶತ್ರುಗಳಿಗೆ ಬೆನ್ನುಕೊಟ್ಟರು. ಯಾಕಂದರೆ ಅವರು ಶಾಪಕ್ಕೀಡಾದರು. ನೀವು ಶಾಪ ಕ್ಕೀಡಾದದ್ದನ್ನು ನಿಮ್ಮ ಮಧ್ಯದಲ್ಲಿಂದ ನಾಶಮಾಡದೆ ಇದ್ದರೆ ಇನ್ನು ಮೇಲೆ ನಾನು ನಿಮ್ಮ ಸಂಗಡ ಇರುವದಿಲ್ಲ.

13ನೀನು ಎದ್ದು ಜನರನ್ನು ಪರಿಶುದ್ಧ ಮಾಡಿ ಹೇಳ ಬೇಕಾದದ್ದೇನಂದರೆ--ನಾಳೆಗೆ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ; ಇಸ್ರಾಯೇಲೇ, ನಿನ್ನ ಮಧ್ಯದಲ್ಲಿ ಶಾಪಕ್ಕೆ ಕಾರಣವಾದದ್ದು ಉಂಟು; ಅದನ್ನು ನಿಮ್ಮಲ್ಲಿಂದ ತೆಗೆದುಹಾಕುವ ಪರಿಯಂತರ ನೀನು ನಿನ್ನ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ಇಸ್ರಾಯೇಲ್‌ ಕರ್ತನಾದ ದೇವರು ಹೇಳುತ್ತಾನೆ.

ಯೆಹೋಶುವ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी