೧ ಸಮುವೇಲನು 20:32

ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 20

30ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ?

31ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು.

32ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು.

33ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.

34ಕೋಪದ ಉರಿಯಿಂದ ಆಗ ಯೋನಾತಾನನು ಮೇಜಿನಿಂದ ಎದ್ದುಹೋಗಿ ತಿಂಗಳಿನ ಎರಡನೇ ದಿವಸದಲ್ಲಿ ಊಟಮಾಡಲಿಲ್ಲ. ತನ್ನ ತಂದೆಯು ದಾವೀದನಿಗೆ ಅವಮಾನ ಮಾಡಿದ್ದ ರಿಂದ ಅವನಿಗೋಸ್ಕರ ವ್ಯಥೆಪಟ್ಟನು.

೧ ಸಮುವೇಲನು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी