ಹೋಶೇ 6:2

ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.

ಸಂದರ್ಭದೊಂದಿಗೆ ಓದಿ · ಹೋಶೇ 6

1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.

2ಆತನು ಎರಡು ದಿನಗಳಾದ ಮೇಲೆ ನಮ್ಮನ್ನು ಪುನರ್ಜೀವಿಸ ಮಾಡುವನು; ಮೂರನೆಯ ದಿನದಲ್ಲಿ ಆತನೇ ನಮ್ಮನ್ನು ಎಬ್ಬಿಸುವನು; ನಾವು ಆತನ ದೃಷ್ಟಿಯಲ್ಲಿ ಜೀವಿಸುವೆವು.

3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.

4ಓ ಎಫ್ರಾಯಾಮೇ, ನಿನಗೆ ನಾನು ಏನು ಮಾಡಲಿ? ಓ ಯೆಹೂದವೇ, ನಿನಗೆ ನಾನು ಏನು ಮಾಡಲಿ? ನಿಮ್ಮ ಒಳ್ಳೇತನವು ಹೊತ್ತಾ ರೆಯ ಮೇಘದ ಹಾಗೆಯೂ ಮುಂಜಾನೆಯ ಮಂಜಿ ನಂತೆಯೂ ಹೋಗಿಬಿಡುತ್ತದೆ.

ಹೋಶೇ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी