ಯೆರೆಮಿಯ 32:34

ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 32

32ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಅವರ ಅರಸರೂ ಪ್ರಧಾನರೂ ಯಾಜಕರೂ ಪ್ರವಾದಿ ಗಳೂ ಯೆಹೂದದ ಜನರೂ ಯೆರೂಸಲೇಮಿನ ನಿವಾಸಿಗಳೂ ಸಹಿತವಾಗಿ ನನಗೆ ಕೋಪೋದ್ರೇಕ ಎಬ್ಬಿಸುವ ಹಾಗೆ ಮಾಡಿದ ಎಲ್ಲಾ ಕೆಟ್ಟತನದ ನಿಮಿತ್ತ ನಾನು ಆ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು.

33ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.

34ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.

35ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.

36ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--

ಯೆರೆಮಿಯ 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी