ವಿಮೋಚನಕಾಂಡ 18:12

ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 18

10ಇತ್ರೋವನು--ಐಗುಪ್ತ್ಯರ ಕೈಗೂ ಫರೋಹನ ಕೈಗೂ ಐಗುಪ್ತ್ಯರ ಅಧಿಕಾರದೊಳಗಿಂದಲೂ ಜನರನ್ನು ತಪ್ಪಿಸಿದ ಕರ್ತನಿಗೆ ಸ್ತೋತ್ರವಾಗಲಿ.

11ಎಲ್ಲಾ ದೇವರು ಗಳಿಗಿಂತ ಕರ್ತನೇ ದೊಡ್ಡವನೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಐಗುಪ್ತ್ಯರು ಗರ್ವಪಟ್ಟಿದ್ದರಿಂದ ಆತನು ಅವರನ್ನು ತಗ್ಗಿಸಿದನು ಅಂದನು.

12ಮೋಶೆಯ ಮಾವನಾದ ಇತ್ರೋವನು ದಹನಬಲಿಯನ್ನೂ ಯಜ್ಞ ಗಳನ್ನೂ ತೆಗೆದುಕೊಂಡು ದೇವರಿಗೆ ಅರ್ಪಿಸಿದನು. ಆಗ ಆರೋನನೂ ಇಸ್ರಾಯೇಲಿನ ಹಿರಿಯರೆಲ್ಲರೂ ದೇವರ ಸನ್ನಿಧಿಯಲ್ಲಿ ಮೋಶೆಯ ಮಾವನ ಸಂಗಡ ಭೋಜನ ಮಾಡುವದಕ್ಕಾಗಿ ಬಂದರು.

13ಮರುದಿನದಲ್ಲಿ ಮೋಶೆಯು ಜನರಿಗೆ ನ್ಯಾಯತೀರಿಸುವದಕ್ಕೆ ಕೂತುಕೊಂಡಾಗ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ಮೋಶೆಯ ಬಳಿಯಲ್ಲಿ ನಿಂತಿ ದ್ದರು.

14ಮೋಶೆಯು ಜನರಿಗೆ ಮಾಡುವದನ್ನೆಲ್ಲಾ ಮೋಶೆಯ ಮಾವನು ನೋಡಿ ಮೋಶೆಗೆ--ಇದೇನು ಜನರಿಗೆ ನೀನು ಮಾಡುವದು? ಯಾಕೆ ನೀನೊಬ್ಬನೇ ಕೂತಿರಲಾಗಿ ಜನರು ಬೆಳಗಿನಿಂದ ಸಾಯಂಕಾಲದ ವರೆಗೆ ನಿನ್ನ ಬಳಿಯಲ್ಲಿ ನಿಂತಿದ್ದಾರೆ ಅಂದನು.

ವಿಮೋಚನಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी