ಫರಿಸಾಯರಲ್ಲಿ ಯೆಹೂದ್ಯರ ಅಧಿಕಾರಿ ಯಾದ ನಿಕೊದೇಮನೆಂಬ ಒಬ್ಬ ಮನುಷ್ಯ ನಿದ್ದನು.
1ಫರಿಸಾಯರಲ್ಲಿ ಯೆಹೂದ್ಯರ ಅಧಿಕಾರಿ ಯಾದ ನಿಕೊದೇಮನೆಂಬ ಒಬ್ಬ ಮನುಷ್ಯ ನಿದ್ದನು.
2ಇವನು ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನಿಗೆ--ರಬ್ಬಿಯೇ (ಗುರುವು), ನೀನು ದೇವರ ಬಳಿಯಿಂದ ಬಂದ ಬೋಧಕನೆಂದು ನಾವು ಬಲ್ಲೆವು, ಯಾಕಂದರೆ ದೇವರು ಒಬ್ಬನ ಕೂಡ ಇಲ್ಲದ ಹೊರತು ನೀನು ಮಾಡುವ ಅದ್ಭುತಕಾರ್ಯಗಳನ್ನು ಯಾವ ಮನುಷ್ಯನೂ ಮಾಡಲಾರನು ಅಂದನು.
3ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನಗೆ ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ತಿರಿಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ನೋಡಲಾರನು ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ