ಮಿಕ 5:10

ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.

ಸಂದರ್ಭದೊಂದಿಗೆ ಓದಿ · ಮಿಕ 5

8ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.

9ನಿನ್ನ ಕೈ ನಿನ್ನ ವೈರಿಗಳೆಲ್ಲರ ಮೇಲೆ ಉನ್ನತ ವಾಗಿರುವದು; ನಿನ್ನ ಶತ್ರುಗಳೆಲ್ಲರು ಕಡಿದು ಬಿಡಲ್ಪಡುವರು.

10ಕರ್ತನು ಹೀಗೆ ಅನ್ನುತ್ತಾನೆ--ಆ ದಿನದಲ್ಲಿ ಆಗುವದೇನಂದರೆ--ನಾನು ನಿನ್ನ ಮಧ್ಯದೊಳಗಿಂದ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.

11ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.

12ನಿನ್ನ ಕೈಯೊಳಗಿಂದ ಮಂತ್ರತಂತ್ರವನ್ನು ಕಡಿದು ಬಿಡುವೆನು; ಕಣಿ ಹೇಳುವವರು ನಿನಗೆ ಇನ್ನು ಇರು ವದಿಲ್ಲ.

ಮಿಕ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी